ಎಚ್.ಡಿ. ಕುಮಾರಸ್ವಾಮಿ ಅವರ ಸಕಲ ವಿದ್ಯೆಗಳೂ ನನಗೆ ಗೊತ್ತಿತ್ತು: ಜಮೀರ್ ಅಹ್ಮದ್ ಖಾನ್

ಬೆಂಗಳೂರು: ‘ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರ ಸಕಲ ವಿದ್ಯೆಗಳೂ ನನಗೆ ಗೊತ್ತಿತ್ತು. ಆದರೆ, ಅವರು ಪ್ಯಾಂಟ್ ಒಳಗೆ ಆರ್ಎಸ್ಎಸ್ ಚೆಡ್ಡಿ ಹಾಕಿದ್ದು ಗೊತ್ತೇ ಆಗಲಿಲ್ಲ’ ಎಂದು ವಸತಿ ಮತ್ತು ಅಲ್ಯಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ಲೇವಡಿ ಮಾಡಿದ್ದಾರೆ. ಬಿಜೆಪಿ ಜತೆಗೆ ಜೆಡಿಎಸ್ ಮೈತ್ರಿಯಿಂದ ಜಾತ್ಯತೀತ ಮನೋಭಾವದ ನೂರಾರು ನಾಯಕರು ಬೇಸರಗೊಂಡಿದ್ದು, ಕಾಂಗ್ರೆಸ್ ಸೇರ್ಪಡೆಗಾಗಿ ನನ್ನ ಸಂಪರ್ಕದಲ್ಲಿದ್ದಾರೆ ಎಂದು ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿಸೋಮವಾರ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ನಾನಾ ಜೆಡಿಎಸ್ ಮುಖಂಡರ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಜೆಡಿಎಸ್ನಿಂದ ಹೊರಬರುತ್ತಿರುವ ಪ್ರಮುಖರನ್ನು ನಗರದ ಅರಮನೆ ಮೈದಾನದಲ್ಲಿ ಬೃಹತ್ ಕಾರ್ಯಕ್ರಮ ಆಯೋಜಿಸಿ ಕಾಂಗ್ರೆಸ್ಗೆ ಸೇರ್ಪಡೆ ಮಾಡಿಕೊಳ್ಳಲಾಗುವುದು’ ಎಂದರು

Loading

Leave a Reply

Your email address will not be published. Required fields are marked *