ದಾವಣಗೆರೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಗುಪ್ತ ದಾವಣಗೆರೆ ಹೊರ ವಲಯದ ಖಾಸಗಿ ರೇಸಾರ್ಟ್ನಲ್ಲಿ ನಿನ್ನೆ (ಜೂ.13) ರಂದು ಗುಪ್ತ ಮಾತುಕಥೆ ನಡೆಸಿದ್ದಾರೆ.
ರೆಸಾರ್ಟ್ನಲ್ಲಿ ಬಾಗಿಲು ಹಾಕಿಕೊಂಡು ಸುಮಾರು 25 ನಿಮಿಷಗಳ ಕಾಲ ಸುಧೀರ್ಘ ಚರ್ಚೆ ನಡೆಸಿದೆ.
ನಿನ್ನೆ ಸಂಜೆ ಶಾಮನೂರು ಶಿವಶಂಕರಪ್ಪ ಅವರನ್ನ ಬೊಮ್ಮಾಯಿ ಅವರು ದಾವಣಗೆರೆ ನಗರದ ಹೊರವಲಯದ ಪುಣೆ ಬೆಂಗಳೂರು ಹೆದ್ದಾರಿಗೆ ಹೊಂದಿಕೊಂಡಿರುವ ಅಪೂರ್ವ ರೆಸಾರ್ಟ್ಗೆ ಕರೆಸಿಕೊಂಡು ಗುಪ್ತ್-ಗುಪ್ತ್ ಸಭೆ ಮಾಡಿದ್ದಾರೆ. ಉಭಯ ನಾಯಕರ ಭೇಟಿ ತೀವ್ರ ಕುತೂಹಲ ಕೆರಳಿಸಿದೆ.
ನಿನ್ನೆ ದಾವಣಗೆರೆಯಲ್ಲಿ ಜಿಲ್ಲಾ ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಹೊಂದಾಣಿಕೆ ರಾಜಕಾರಣ ಮಾಡಿ ಪಕ್ಷ ಸೋಲಿಸಿದ್ದೀರಿ ಎಂದು ಆಕ್ರೋಶ ವ್ಯಕ್ತವಾಗಿತ್ತು. ರಾಜ್ಯದ ಜಿಲ್ಲಾ ನಾಯಕರ ವಿರುದ್ಧ ಕಾರ್ಯಕರ್ತರು ಕಿರಿಕಾರಿದ್ದರು. ಇದರ ಬೆನ್ನಲ್ಲೇ ಬೊಮ್ಮಾಯಿ-ಶಾಮನೂರು ಭೇಟಿ ಭಾರೀ ಚರ್ಚೆಗೆ ಗ್ರಾಸವಾಗಿದೆ.