ಬೆಂಗಳೂರು: ಭಾರತ ಇಂದು 77ನೇ ಸ್ವಾತಂತ್ರ್ಯ ದಿನವನ್ನು ಆಚರಿಸುತ್ತಿದೆ. 77 ನೇ ಸ್ವಾತಂತ್ರ್ಯೋತ್ಸವದ ನಿಮಿತ್ತ, ಮಾಜಿ ಸಿಎಂ HD ಕುಮಾರಸ್ವಾಮಿ ಅವರು ಧ್ವಜಾರೋಹಣ ಮಾಡಿದರು.ಬೆಂಗಳೂರಿನ JDS ಕೇಂದ್ರ ಕಚೇರಿಯಲ್ಲಿ ತ್ರಿವರ್ಣ ಧ್ವಜವನ್ನು ಆರೋಹಣ ಮಾಡುವ ಮೂಲಕ ರಾಜ್ಯದ ಜನತೆಗೆ ಶುಭಾಶಯ ತಿಳಿಸಿದ್ದಾರೆ.
ನಂತರ ಎಚ್.ಡಿ.ಕುಮಾರಸ್ವಾಮಿ ಅವರು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು.
ಪಂಚಭೂತಗಳ ಸಮತತ್ತ್ವ ಎಷ್ಟು ಆದರ್ಶಪ್ರಾಯವೋ ಭಾರತೀಯ ಸ್ವಾತಂತ್ರ್ಯದ ಪರಿಕಲ್ಪನೆ ಅಷ್ಟೇ ಶ್ರೇಷ್ಠ. ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರು, ಮತ್ತಿತರೆ ಅನೇಕ ಮಹಾಪುರುಷರ ತ್ಯಾಗ, ಬಲಿದಾನದ ಮಹಾಫಲವನ್ನು ಜತನದಿಂದ ಕಾಪಾಡಿಕೊಳ್ಳೋಣ. ಭಾರತದ ಸಮಸ್ತ ಬಂಧುಗಳಿಗೆ ಸ್ವಾತಂತ್ರ್ಯ ದಿನೋತ್ಸವದ ಶುಭಾಶಯಗಳು ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷರಾದ ಸಿಎಂ ಇಬ್ರಾಹಿಂ , ವಿಧಾನ ಪರಿಷತ್ ಶಾಸಕರಾದ ಟಿ ಎ ಶರವಣ, ತಿಪ್ಪೇಸ್ವಾಮಿ , ಬೆಂಗಳೂರು ನಾಗರಾಜ್ ಹೆಚ್.ಎಂ. ರಮೇಶ್ ಗೌಡ ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದರು