ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ಪತ್ನಿ ವಿರುದ್ಧದ ಇಡಿ ಸಮನ್ಸ್ ರದ್ದು ಪಡಿಸಿ ಬೆಂಗಳೂರಿನ ಹೈಕೋರ್ಟ್ ಆದೇಶ ಹೊರಡಿಸಿದೆ. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ. ಅಲ್ಲದೇ ಆರೋಪಿಯನ್ನು ಖುಲಾಸೆಗೊಳಿಸಿದ ಬಳಿಕ ಪ್ರಕ್ರಿಯೆ ಮುಕ್ತಾಯಗೊಳಿಸುವುದನ್ನು ಸುಪ್ರೀಂ ಕೋರ್ಟ್ ಸಹ ಪರಿಗಣಿಸಿದೆ. ಖುಲಾಸೆ ಪ್ರಕರಣದಲ್ಲಿ ಆರೋಪಿಯ ವಿರುದ್ಧ ವಿಚಾರಣೆ ನಡೆಸುವುದಿಲ್ಲ. ಹೀಗಾಗಿ, ಬಿ ವರದಿ ಒಪ್ಪಿಕೊಂಡು ಪ್ರಕ್ರಿಯೆ ಮುಕ್ತಾಯಗೊಳಿಸುವುದು ಮತ್ತು ಅಂಥ ಒಪ್ಪಿಗೆ ಅಂತಿಮವಾದಾಗ ಪ್ರಕ್ರಿಯೆ ವಜಾ ಆಗಿದ್ದು, ಖುಲಾಸೆಯಾಗಿದೆ. ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ರಿಚಾ ಅವರ ವಿರುದ್ಧ ಜಾರಿ ನಿರ್ದೇಶನಾಲಯ ಜಾರಿ ಮಾಡಿರುವ ಪ್ರಕ್ರಿಯೆಯು ವಜಾಕ್ಕೆ ಅರ್ಹವಾಗಿದೆ ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿದೆ.