ಮೈಸೂರು: ಮಾಜಿ ಮುಖ್ಯಮಂತ್ರಿ HD ಕುಮಾರಸ್ವಾಮಿ ಅವರು ಇಂದು ನಂಜನಗೂಡು ಶ್ರೀ ಶ್ರೀಕಂಠೇಶ್ವರ ದೇಗುಲಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಹೌದು ಮೈಸೂರು ಜಿಲ್ಲೆಯ ನಂಜನಗೂಡಿಗೆ ಮಾಜಿ ಸಿಎಂ ಕುಮಾರಸ್ವಾಮಿ ಅವರು ಕುಟುಂಬ ಸಮೇತರಾಗಿ ಆಗಮಿಸಿ ನಂಜುಂಡೇಶ್ವರನ ದರ್ಶನ ಮಾಡಿದ್ದಾರೆ. ಮೈಸೂರು ಜಿಲ್ಲೆಯ ನಂಜುಂಡೇಶ್ವರನಿಗೆ ಹೆಚ್ಡಿ ಕುಮಾರಸ್ವಾಮಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ನಂಜನಗೂಡಿನ ಬಳಿಕ ಮೈಸೂರಿನ ಚಾಮುಂಡಿಬೆಟ್ಟಕ್ಕೂ ತೆರಳಲಿದ್ದಾರೆ.