ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸುರಿದ ಧಾರಾಕಾರ ಮಳೆಗೆ ಇನ್ಫೋಸಿಸ್ ಉದ್ಯೋಗಿ ಭಾನುರೇಖಾ ಅವರು ಬಲಿಯಾದ ಘಟನೆಯ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು ಮಳೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದ ಬಿಬಿಎಂಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು ನಗರದಲ್ಲಿ ಇಂದು ಸುರಿದ ಭಾರೀ ಮಳೆಯಿಂದ ಕೆ.ಆರ್.ವೃತ್ತದ ಅಂಡರ್ ಪಾಸ್ ನಲ್ಲಿ ಮಳೆನೀರಿಗೆ ಸಿಲುಕಿ ಇನ್ಫೋಸಿಸ್ ಉದ್ಯೋಗಿ ಭಾನುರೇಖಾ ಎಂಬ ಯುವತಿ ಸಾವನ್ನಪ್ಪಿರುವ ಸುದ್ದಿ ತಿಳಿದು ತೀವ್ರ ಆಘಾತವಾಯಿತು. ರಭಸ ಮಳೆಯ ಮುನ್ನೆಚ್ಚರಿಕೆ ಇದ್ದರೂ ಬಿಬಿಎಂಪಿ ಆಡಳಿತ ಎಚ್ಚೆತ್ತುಕೊಳ್ಳದೇ ಇರುವುದು ನಿರ್ಲಕ್ಷ್ಯದ ಪರಮಾವಧಿ ಎಂದು ಅವರು ಬಿಬಿಎಂಪಿ ಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.