ಬೆಂಗಳೂರು;- ಗುತ್ತಿಗೆದಾರರ ಬಿಲ್ ಪಾವತಿ ಬಗ್ಗೆ ಸಚಿವ ಜಾರಕಿಹೊಳಿ ಅವರು ಮಹತ್ವದ ಮಾಹಿತಿ ನೀಡಿದ್ದಾರೆ. ಪರಿಶಿಷ್ಟ ಜಾತಿ/ಪಂಗಡದ ಗುತ್ತಿಗೆದಾರರು ಅನುಷ್ಠಾನಗೊಳಿಸಿದ ಲೋಕೋಪಯೋಗಿ ಇಲಾಖೆ ಕಾಮಗಾರಿಗಳ ಬಾಕಿ ಬಿಲ್ ಅಕ್ಟೋಬರ್ ತಿಂಗಳ ಅಂತ್ಯದೊಳಗೆ ಪಾವತಿಸಲಾಗುವುದು ಎಂದು ಹೇಳಿದ್ದಾರೆ.
ಬಾಕಿ ಬಿಲ್ ಪಾವತಿ ಕಾರ್ಯ ಶೀಘ್ರದಲ್ಲಿ ಆರಂಭವಾಗಲಿದೆ. ಅದರಲ್ಲಿ ಆದ್ಯತೆ ಮೇರೆಗೆ ಎಸ್ಸಿ/ಎಸ್ಟಿ ಗುತ್ತಿಗೆದಾರರ ಬಾಕಿ ಬಿಲ್ ಪಾವತಿಸಲಾಗುವುದು. ಅಕ್ಟೋಬರ್ ತಿಂಗಳಾಂತ್ಯದಲ್ಲಿ ಎಸ್ಸಿ/ಎಸ್ಟಿ ಗುತ್ತಿಗೆದಾರರು ಸಲ್ಲಿಸಿದ ಎಲ್ಲ ಬಿಲ್ಗಳ ಮೊತ್ತವನ್ನೂ ಪಾವತಿಸಲಾಗುವುದು ಎಂದು ತಿಳಿಸಿದರು.
ಅದೇ ರೀತಿ ಬಿಲ್ ಪಾವತಿಗೆ ಸಂಬಂಧಿಸಿದಂತೆ ಎಲ್ಒಸಿ ನೀಡುವಲ್ಲಿಯೂ ಎಸ್ಸಿ/ಎಸ್ಟಿ ಗುತ್ತಿಗೆದಾರರಿಗೆ ಮೀಸಲಾತಿ ನೀಡಬೇಕು. ಕೆಆರ್ಡಿಎಲ್, ನಿರ್ಮಿತಿ ಕೇಂದ್ರ ಕಾಮಗಾರಿಗಳಿಗೆ ಕಾರ್ಯಾದೇಶ ನೀಡಿದ ಸಂದರ್ಭದಲ್ಲಿಯೇ ಕಾಮಗಾರಿ ಮೊತ್ತದ ಶೇ. 30ರಷ್ಟು ಹಣವನ್ನು ಬಿಡುಗಡೆ ಮಾಡಲಾಗುತ್ತದೆ. ಆ ವ್ಯವಸ್ಥೆಯನ್ನು ಎಸ್ಸಿ/ಎಸ್ಟಿ ಗುತ್ತಿಗೆದಾರರಿಗೂ ಅನ್ವಯವಾಗುವಂತೆ ಮಾಡಬೇಕು. ಲೋಕೋಪಯೋಗಿ ಇಲಾಖೆ ಸೇರಿದಂತೆ ಉಳಿದೆಲ್ಲ ಇಲಾಖೆಗಳ ಬಿಲ್ ಪಾವತಿ ವೇಳೆ ಮೀಸಲಾತಿ ನೀಡಬೇಕು ಎಂದು ಮನವಿ ಮಾಡಿದರು.