ಕ್ಯಾಲಿಫೋರ್ನಿಯಾದಲ್ಲಿ ಗುಂಡು ಹಾರಿಸಿ ಪತ್ನಿಯನ್ನು ಹತ್ಯೆ ಮಾಡಿದ ನ್ಯಾಯಾಧೀಶ..!

ಸ್ಯಾಕ್ರಮೆಂಟೊ: ನ್ಯಾಯಾಧೀಶರೊಬ್ಬರು ತನ್ನ ಹೆಂಡತಿಯನ್ನು ಗುಂಡು ಹಾರಿಸಿ ಕೊಂದ ಘಟನೆ ಕ್ಯಾಲಿಫೋರ್ನಿಯಾದಲ್ಲಿ  ನಡೆದಿದೆ. ಕೊಂದ ಬಳಿಕ ತನ್ನ ಸಹದ್ಯೋಗಿಯೊಬ್ಬರಿಗೆ `ನಾನು ನಾಳೆ ಕೋರ್ಟ್ಗೆ ಬರುವುದಿಲ್ಲ, ಕಸ್ಟಡಿಯಲ್ಲಿರುತ್ತೇನೆ’ ಎಂದು ಸಂದೇಶ ಕಳುಹಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ನ್ಯಾಯಾಧೀಶ ಜೆಫ್ರಿ ಫರ್ಗುಸನ್ (72) ಎಂಬಾತ ಪತ್ನಿಯನ್ನು ಕೊಲೆಗೈದ ಆರೋಪಿ. ಆತನ ಮನೆಯಲ್ಲಿ ಪರವಾನಿಗೆ ಹೊಂದಿದ್ದ ಸುಮಾರು 47 ಬಂದೂಕುಗಳು ಮತ್ತು 26,000 ಸಜೀವ ಮದ್ದುಗುಂಡುಗಳು ಪತ್ತೆಯಾಗಿವೆ. ಪೊಲೀಸರು ತೆರಳಿದ್ದಾಗ ಎದೆಗೆ ಗುಂಡೇಟು ಬಿದ್ದು ಆತನ ಪತ್ನಿ ಮೃತಪಟ್ಟಿದ್ದಳು. ಈ ವೇಳೆ ಆತ ವಿಪರೀತವಾಗಿ ಕುಡಿದಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆ.3 ರಂದು ಫರ್ಗುಸನ್ ಮತ್ತು ಅವರ ಪತ್ನಿ ಶೆರಿಲ್ ಅನಾಹೈಮ್ ನಗರದ ರೆಸ್ಟೋರೆಂಟ್ನಲ್ಲಿ ಜಗಳ ಪ್ರಾರಂಭಿಸಿದ್ದರು. ಬಳಿಕ ಮನೆಗೆ ತೆರಳಿದ್ದ ಅವರು ಗುಂಡು ಹಾರಿಸಿ ಪತ್ನಿಯನ್ನು ಹತ್ಯೆ ಮಾಡಿದ್ದಾನೆ. ಬಳಿಕ ಪೊಲೀಸರಿಗೆ ಕರೆ ಮಾಡಿ ತನ್ನ ಪತ್ನಿಯನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಅಂತ ಹೇಳಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಬಗ್ಗೆ ಲಾಸ್ ಏಂಜಲೀಸ್ನ ನ್ಯಾಯಾಲಯವು  ವಿಚಾರಣೆ ನಡೆಸಿದ್ದು, ಆರೋಪಿ ಕೊಲೆ ಮಾಡಿರುವುದನ್ನು ನಿರಾಕರಿಸಿದ್ದಾನೆ. ಆತನ ವಕೀಲ ಇದು ಆಕಸ್ಮಿಕ ಘಟನೆ. ಉದ್ದೇಶಿತ ಕೊಲೆ ಅಲ್ಲ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಆರೋಪಿ ಫರ್ಗುಸನ್ನನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಅಲ್ಲದೇ ಕುಡಿಯದಂತೆ ನ್ಯಾಯಾಲಯ ಆದೇಶಿಸಿದೆ. ಅಕ್ಟೋಬರ್ 30 ರಂದು ಮತ್ತೆ ನ್ಯಾಯಾಲಯ ವಿಚಾರಣೆ ನಡೆಸುವ ಸಾಧ್ಯತೆ ಇದೆ.

Loading

Leave a Reply

Your email address will not be published. Required fields are marked *