ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮುಂದಿನ 5 ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಚಾಮರಾಜನಗರ, ಕೋಲಾರ, ಮೈಸೂರು, ಮಂಡ್ಯ ಹಾಗೂ ರಾಮನಗರದಲ್ಲಿ ಇಂದಿನಿಂದ 5 ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಚಿತ್ರದುರ್ಗ, ತುಮಕುರು, ವಿಜಯನಗರ, ಬಾಗಲಕೋಟೆ, ದಾವಣಗೆರೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೇ.23 ರಿಂದ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.