ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮೇ.21 ಮತ್ತು 22 ರಂದು ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇಂದು ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಇರಲಿದ್ದು, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಕನ್ನಡ, ದಕ್ಷಿಣ ಒಳನಾಡಿನ ಬೆಂಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಬಳ್ಳಾರಿ, ಕೋಲಾರ, ಮೈಸೂರು, ಚಾಮರಾಜನಗರ, ಕೊಡಗು, ಚಿಕ್ಕಮಗಳೂರು, ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.