ಬೆಂಗಳೂರು : ಬಿಸಿಲಿನ ಬೇಗೆಗೆ ಕಂಗೆಟ್ಟಿರುವ ಜನತೆಗೆ ನೆಮ್ಮದಿಯ ಸುದ್ದಿ, ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 4 ದಿನ ಗುಡುಗು ಸಹಿತ ಭಾರೀ ಮಳೆಯಾಗು ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಹಲವೆಡೆ ವಾರಾಂತ್ಯದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಮೇ 21 ಮತ್ತು 22 ರಂದು ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಗುಡುಗು, ಸಿಡಿಲು ಮತ್ತು ಗಾಳಿಯೊಂದಿಗೆ ಮಳೆಯಾಗಲಿದೆ. ಮೇ 22 ರಂದು ಕರಾವಳಿ ಪ್ರದೇಶದಲ್ಲಿಯೂ ಗಾಳಿ, ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ವಾರಾಂತ್ಯದಲ್ಲಿ ಬೆಂಗಳೂರಿನಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ ಎರಡು ದಿನ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಮೇ 20 ಮತ್ತು 21 ರಂದು ಸಣ್ಣ ಅಥವಾ ಮಧ್ಯಮ ಪ್ರಮಾಣದಲ್ಲಿ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಎಂದು ಇಲಾಖೆ ತಿಳಿಸಿದೆ.