ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಗಾಳಿಸಹಿತ ಭಾರಿ ಮಳೆಯಾಗಿದ್ದು, ವಾಹನ ಸವಾರರು ಪರದಾಡಿದರು.
ಜಿಲ್ಲೆಯ ಶೃಂಗೇರಿ ತಾಲೂಕಿನ ಕುಂಚೆಬೈಲು ಗ್ರಾಮದ ಬಳಿ ಬೃಹತ್ ಗಾತ್ರದ ಮರವೊಂದು ಓಮಿನಿ ಕಾರಿನ ಮೇಲೆ ಬಿದ್ದು ಕಾರು ಸಂಪೂರ್ಣ ಜಖಂ ಆಗಿದೆ.
ಓಮ್ನಿ ಕಾರು ಸಂಪೂರ್ಣ ಜಖಂ ಆಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ರಸ್ತೆ ಸಂಚಾರ ಬಂದ್ ಆಗಿದೆ
ಶೃಂಗೇರಿ, ಕೊಪ್ಪ ಸೇರಿದಂತೆ ಹಲವು ಕಡೆ ಗಾಳಿ ಸಹಿತ ಭಾರಿ ಮಳೆಯಾಗಿದ್ದು, ಬಿಸಿಲ ಧಗೆಗೆ ಕಂಗೆಟ್ಟಿದ್ದ ಜನರಿಗೆ ವರುಣರಾಯ ತಂಪೆರೆದಿದ್ದಾನೆ.