ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಜುಲೈ 16ರವರೆಗೂ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಲಿದ್ದು ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಜಾರಿ ಮಾಡಿದೆ.
ಕರಾವಳಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರದಲ್ಲಿ ಮೋಡಕವಿದ ವಾತಾವರಣವಿದ್ದು, ಮಳೆಯಾಗುವ ಸಂಭವವಿದೆ.
ಉಡುಪಿಯಲ್ಲಿ ಸುರಿದ ಭಾರೀ ಮಳೆಯಿಂದ ಕಾಪು ತಾಲೂಕು ಇನ್ನಂಜೆ -ಕಲ್ಯಾ ನಡುವೆ ಸಂಪರ್ಕ ಕಡಿತಗೊಂಡಿದೆ. ಮಾರ್ಕೊಡಿ ಹೊಳೆಯ ನೀರಿನಿಂದ ಎರಡು ಗ್ರಾಮದ ಸಂಪರ್ಕ ಕಡಿತಗೊಂಡಿದ್ದು, ನೂರಾರು ಎಕರೆ ಭತ್ತದ ಬೇಸಾಯ ನೀರು ಪಾಲಾಗಿದೆ.