ಚಿನ್ನದ ದರದಲ್ಲಿ ನಿರಂತರವಾಗಿ ಏರಿಕೆ ಆಗುತ್ತಲೇ ಇದೆ. ಕಳೆದ ಎರಡು ವಾರದಿಂದ ಶ್ರಾವಣ ಮಾಸದಲ್ಲಿ ನಿರಂತರವಾಗಿ ಚಿನ್ನದ ಬೆಲೆಯಲ್ಲಿ ಏರಿಕೆ ಆಗುತ್ತಾ ಬಂದಿದೆ. ಇಂದೂ ಕೂಡಾ ಚಿನ್ನದ ದರದಲ್ಲಿ ಏರಿಕೆ ಕಂಡಿದೆ.
ದೇಶದಲ್ಲಿ 1 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆಯು 5,530 ರೂಪಾಯಿ ಇದೆ.
1 ಗ್ರಾಂ 24 ಕ್ಯಾರೆಟ್ ಚಿನ್ನ ಅಥವಾ 999 ಗೋಲ್ಡ್ ಬೆಲೆ 6,032 ರೂಪಾಯಿ ಇದೆ. ಮಾರುಕಟ್ಟೆ ಬೆಲೆಯಲ್ಲಿ ಸೋಮವಾರದಿಂದ ಬುಧವಾರಕ್ಕೆ 10 ರೂಪಾಯಿ ಏರಿಕೆ ಕಂಡಿದೆ.
ಬೆಂಗಳೂರಲ್ಲಿ ಚಿನ್ನದ ದರ
ಇನ್ನು ದೈನಂದಿನ ಪ್ರಕ್ರಿಯೆಯಲ್ಲಿ ಚಿನ್ನದ ದರವು ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಎಷ್ಟಿದೆ ಎಂದು ನೋಡುವುದಾದರೆ, ಬೆಂಗಳೂರಲ್ಲಿಯೂ ಚಿನ್ನದ ಬೆಲೆಯಲ್ಲಿ 10 ರೂಪಾಯಿ ಏರಿಕೆ ಕಂಡಿದೆ. 22 ಕ್ಯಾರೆಟ್ 1 ಗ್ರಾಂ ಚಿನ್ನದ ಬೆಲೆ 5530 ರೂ ಇದ್ದು, 10 ಗ್ರಾಂ ಬೆಲೆ 6,032 ರೂ ಇದೆ.
ಬೆಂಗಳೂರಲ್ಲಿ ಬೆಳ್ಳಿಯ ದರ
ಬೆಂಗಳೂರಲ್ಲಿ ಬೆಳ್ಳಿಯ ದರದಲ್ಲಿ ಸ್ಥಿರತೆ ಇದ್ದು, ಒಂದು ಗ್ರಾಂ ಬೆಳ್ಳಿಯ ದರ 76.30 ರೂಪಾಯಿ ಇದ್ದು, 10 ಗ್ರಾಂ ಬೆಳ್ಳಿಯ ದರ 763 ರೂಪಾಯಿ ಇದೆ. ಕೆ.ಜಿ ಬೆಳ್ಳಿಯ ದರ 76,300 ರೂಪಾಯಿ ಇದೆ.