ಬೆಂಗಳೂರು;- ಚಿನ್ನದ ಸರ ಕದ್ದ ಆರೋಪಿಗಳನ್ನು ಹೈಕೋರ್ಟ್ ಖುಲಾಸೆಗೊಳಿಸಿ ಆದೇಶಿಸಿದೆ. ನ್ಯಾಯಮೂರ್ತಿಗಳಾದ ಎಚ್.ಬಿ.ಪ್ರಭಾಕರ ಶಾಸ್ತ್ರಿ ಮತ್ತು ನ್ಯಾಯಮೂರ್ತಿ ಅನಿಲ್ ಬಿ.ಕಟ್ಟಿ ಅವರಿದ್ದ ನ್ಯಾಯಪೀಠ ಆದೇಶಿಸಿದೆ.
ಮೂರು ಪ್ರಕರಣದಲ್ಲಿ ಆರೋಪಿಗಳು ಮಹಿಳೆಯನ್ನು ಚಿನ್ನಾಭರಣ ದೋಚಲು ಚಾಕು ತೋರಿಸಿ ಬೆದರಿಕೆ ಹಾಕಿದ್ದಾರೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ಆದರೆ, ಆ ಬೆದರಕೆ ಹಾಕಿದ ಕತ್ತಿಯನ್ನು ವಶಪಡಿಸಿಕೊಂಡು ಸಾಕ್ಷ್ಯವನ್ನಾಗಿ ನ್ಯಾಯಾಲಯದ ಮಂದಿಡುವಲ್ಲಿ ವಿಫಲರಾಗಿದ್ದಾರೆ ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿದೆ. ಅಲ್ಲದೆ, ಪ್ರಸ್ತುತ ಪ್ರಕರಣದಲ್ಲಿ ತನಿಖಾಧಿಕಾರಿಗಳು ಅಪರಾಧ ಕೃತ್ಯ ನಡೆದಿರುವುದನ್ನು ನಡೆದಿರುವ ಸಂಬಂಧ ವಿವರಿಸಿದ್ದಾರೆ. ಆದರೆ, ಅದಕ್ಕೆ ಪೂರಕವಾದ ಸಾಕ್ಷ್ಯಗಳು ಇಲ್ಲ ಎಂದು ಪೀಠ ತಿಳಿಸಿದೆ.
ಆರೋಪಗಳ ಗುರುತು ಪತ್ತೆ ಮಾಡುವುದಕ್ಕೂ ಮುನ್ನ ಸಂತ್ರಸ್ತರಿಗೆ ತೋರಿಸಲಾಗಿದೆ. ಆ ಬಳಿಕ ಪೆರಡ್ ನಡೆಸಲಾಗಿದೆ. ಈ ಪ್ರಕ್ರಿಯೆಯಿಂದ ಬಂಧಿತರೇ ಆರೋಪಿಗಳು ಎಂದು ಸಂತ್ರಸ್ತರು ತಿಳಿಸಿರುತ್ತಾರೆ. ಆ ರೀತಿಯ ಪೆರೆಡ್‌ಗೆ ಯಾವುದೇ ಮೌಲ್ಯವಿಲ್ಲ ಎಂದು ಪೀಠ ತನ್ನ ಆದೇಶದಲ್ಲಿ ಉಲ್ಲೇಖಿಸಿದೆ. ಬೆಂಗಳೂರಿನಲ್ಲಿ ಕದ್ದ ಚಿನ್ನಾಭರಣಗಳನ್ನು ಉತ್ತರಪ್ರದೇಶದಲ್ಲಿ ಗ್ರಾಹಕರ ಸೋಗಿನಲ್ಲಿ ಗಿರಿವಿ ಇಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದರೂ, ಅವುಗಳನ್ನು ವಶಪಡಿಸಿಕೊಳ್ಳುವಲ್ಲಿ ವಿಫಲರಾಗಿದ್ದಾರೆ.
ಈ ನಿಟ್ಟಿನಲ್ಲಿ ಮೇಲ್ಮನವಿ ಅರ್ಜಿನ್ನು ವಜಾಗೊಳಿಸುತ್ತಿರುವುದಾಗಿ ಪೀಠ ತಿಳಿಸಿದ್ದು, ಮೂರು ಪ್ರಕರಣಗಳಲ್ಲಿ ವಿಚಾರಣಾ ನ್ಯಾಯಾಲಯ ಸೂಕ್ತರೀತಿಯಲ್ಲಿ ಸಾಕ್ಷ್ಯಾಧಾರಗಳನ್ನು ಪರಿಗಣಿಸಿ ಆರೋಪಿಗಳನ್ನು ಖುಲಾಸೆ ಗೊಳಿಸಿದೆ