ಶಿಮ್ಲಾ: ಹಿಮಾಚಲ ಪ್ರದೇಶದ (Himachal Pradesh) ಕುಲು (Kullu) ಜಿಲ್ಲೆಯಲ್ಲಿ ಗುರುವಾರ ಭೂಕುಸಿತ (Landslide) ಉಂಟಾಗಿದ್ದು, ಭಾರೀ ಕಟ್ಟಡಗಳು ನೆಲಸಮವಾಗಿವೆ. ಭೂಕುಸಿತದ ದೃಶ್ಯಗಳು ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದು, ಅನೇಕ ಮನೆಗಳು ನಾಶವಾಗಿರುವುದು ಕಂಡುಬಂದಿದೆ.
ಭೂಕುಸಿತದಿಂದಾಗಿ ಸ್ಥಳದಲ್ಲಿ ಸಿಲುಕಿರುವವರನ್ನು ರಕ್ಷಿಸಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ಕಾರ್ಯಾಚರಣೆ ನಡೆಸುತ್ತಿದೆ. ಭಾರತೀಯ ಹವಾಮಾನ ಇಲಾಖೆ (IMD) ರೆಡ್ ಅಲರ್ಟ್ ಘೋಷಿಸಿದ್ದು, ಇಂದಿನಿಂದ ಮುಂದಿನ 2 ದಿನಗಳ ಕಾಲ ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿದೆ.
ವಿನಾಶಕಾರಿ ಭೂಕುಸಿತದ ನಡುವೆ ಅನ್ನಿ, ಕುಲು ಪ್ರದೇಶದ ಬೃಹತ್ ವಾಣಿಜ್ಯ ಕಟ್ಟಡಗಳು ಕುಸಿಯುತ್ತಿರುವ ದೃಶ್ಯಗಳು ಹೊರಹೊಮ್ಮುತ್ತಿವೆ. ಆಡಳಿತ ಮುಂಚಿತವಾಗಿಯೇ ಅಪಾಯವನ್ನು ಗುರುತಿಸಿ, 2 ದಿನಗಳ ಹಿಂದೆಯೇ ಜನರನ್ನು ಅಲ್ಲಿಂದ ಸುರಕ್ಷಿತ ಪ್ರದೇಶಗಳಿಗೆ ಕಳುಹಿಸಿದ್ದಾಗಿ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖ್ವಿಂರ್ ಸಿಂಗ್ ಸುಖು ಟ್ವೀಟ್ನಲ್ಲಿ ತಿಳಿಸಿದ್ದಾರೆ.