ಭೀಕರ ಅಪಘಾತ: ಸ್ಥಳದಲ್ಲೇ ನಾಲ್ಕು ಜನರ ಸಾವು

ಚಿತ್ರದುರ್ಗ: ನಿಂತ ಲಾರಿಗೆ ಹಿಂಬದಿಯಿಂದ ಕಾರು ಗುದ್ದಿ ಸ್ಥಳದಲ್ಲೇ ನಾಲ್ಕು ಜನರ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ನಗರದ ಹೊರವಲಯದ ಮಲ್ಲಾಪುರ ಗ್ರಾಮದ ಬಳಿ ನಡೆದಿದೆ. ಮೃತರನ್ನು ಮಲ್ಲಿಕ್,ಕಲೀಲ್,ತಬ್ರೀಜ್ ಮತ್ತು ಶ್ಮುದ್ದೀನೀನ್ ಎಂದು ಗುರುತಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ-13ರಲ್ಲಿ ವೇಗವಾಗಿ ಬಂದ ಕಾರು, ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಇದರಿಂದ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೂವರಿಗೆ ತೀರ್ವಗಾಯದ ಕಾರಣ ಚಿತ್ರದುರ್ಗದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನರ್ಗೀಸ್,ರೆಹಾನ್ ಮತ್ತು ರಹಾನ್ ಗಾಯಗೊಂಡಿದ್ದು, . ಸ್ಥಳಕ್ಕೆ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Loading

Leave a Reply

Your email address will not be published. Required fields are marked *