ಮಾಸ್ಕೋ: ರಷ್ಯಾದ ಮಾಸ್ಕೋದಲ್ಲಿನ ಶಾಪಿಂಗ್ ಮಾಲ್ ವೊಂದರಲ್ಲಿ ಬಿಸಿನೀರಿನ ಪೈಪ್ ಸ್ಫೋಟಗೊಂಡ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.
ಘಟನೆಯಲ್ಲಿ 10 ಮಂದಿ ತೀವ್ರ ಸುಟ್ಟಗಾಯಗಳಿಂದ ಬಳಲುತ್ತಿದ್ದು, ಅವರುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮೇಯರ್ ಸೆರ್ಗೆಯ್ ಸೊಬಯಾನಿನ್ ಹೇಳಿದ್ದಾರೆ.
ವ್ರೆಮೆನಾ ಗೋಡಾ (ದಿ ಸೀಸನ್ಸ್) ಹೆಸರಿನ ಮಾಲ್ ನಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. 2007 ರಲ್ಲಿ ಪ್ರಾರಂಭವಾದ ಈ ಶಾಪಿಂಗ್ ಮಾಲ್’ನಲ್ಲಿ 150 ಕ್ಕೂ ಹೆಚ್ಚು ಮಳಿಗೆಗಳಿವೆ.