ಬೆಂಗಳೂರು: ಮನೆಯೊಂದರಲ್ಲಿ ಗೃಹಿಣಿ ಆತ್ಮಹತ್ಯೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಗೋಪಾಲ ನಗರದ ಮೋಹನ್ ಥಿಯೇಟರ್ ಬಳಿ ನಡೆದಿದೆ. ಕಾವ್ಯ (22) ಮೃತ ಗೃಹಿಣಿಯಾಗಿದ್ದು, ಪ್ರವೀಣ್ ಮತ್ತು ಆತನ ಪೋಷಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಮೃತ ಕಾವ್ಯ ಮೂಲತಃ ತುಮಕೂರು ಜಿಲ್ಲೆಯ ಕುಣಿಗಲ್ ಪಟ್ಟಣದವರು. ಪ್ರವೀಣ ಮತ್ತು ಕಾವ್ಯ ವಿವಾಹವಾಗಿ ಎರಡು ವರ್ಷ ಕಳೆದಿದೆ. ದಂಪತಿಗೆ ಒಂದು ವರ್ಷದ ಮಗುವಿದೆ. ರಾಜಗೋಪಾಲ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಪೋಲಿಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.