ಹಾಸನ: ಗೃಹಿಣಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ನಾಗಯ್ಯನಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಪತಿಯೇ ಕೊಲೆ ಮಾಡಿದ್ದಾನೆಂದು ಪೋಷಕರು ಆರೋಪ ಮಾಡಿದ್ದಾರೆ. ಸುರಭಿ (24) ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಮಹಿಳೆ. ಮೂರು ವರ್ಷದ ಹಿಂದೆ ನಾಗಯ್ಯನಕೊಪ್ಪಲು ಗ್ರಾಮದ ದರ್ಶನ್ ಜೊತೆ ವಿವಾಹವಾಗಿದ್ದರು.
ನಿನ್ನೆ ಮನೆಯಲ್ಲಿ ಸಾವನ್ನಪ್ಪಿದ್ದು, ನಿಮ್ಮ ಮಗಳು ಲೋ ಬಿಪಿಯಾಗಿ ಸಾವನ್ನಪ್ಪಿದ್ದಾರೆ ಎಂದು ಸುರಭಿ ಪೋಷಕರಿಗೆ ದರ್ಶನ್ ಕರೆ ಮಾಡಿದ್ದಾರೆ. ಸುರಭಿಯನ್ನು ಕೊಲೆ ಮಾಡಿದ್ದಾರೆ ಎಂದು ಪೋಕಷರ ಆರೋಪ ಮಾಡಿದ್ದಾರೆ. ಇದನ್ನು ಪ್ರಶ್ನಿಸುತ್ತಿದ್ದ ಸುರಭಿಯನ್ನು ನೇಣುಬಿಗಿದು ಕೊಲೆ ಮಾಡಿ ನಾಟವಾಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಶ್ರವಣಬೆಳಗೊಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.