ಹುಬ್ಬಳ್ಳಿ ಗಲಭೆ ಪ್ರಕರಣ: ಶ್ರೀಕಾಂತ್ ಪೂಜಾರಿಗೆ ಷರತ್ತುಬದ್ಧ ಜಾಮೀನು

ಹುಬ್ಬಳ್ಳಿ: ಹುಬ್ಬಳ್ಳಿ ಗಲಭೆ ಪ್ರಕರಣದ ಪ್ರಮುಖ ಆರೋಪಿ ಕರಸೇವಕ ಶ್ರೀಕಾಂತ್ ಪೂಜಾರಿಗೆ ಕೋರ್ಟ್‌ ಜಾಮೀನು ಮಂಜೂರು ಮಾಡಿದೆ. ಹುಬ್ಬಳ್ಳಿಯ ಒಂದನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಶ್ರೀಕಾಂತ್‌ ಪೂಜಾರಿ ಪರ ವಕೀಲರು ಪ್ರತಿಕ್ರಿಯಿಸಿ, ನಮಗೆ ಜಾಮೀನು ಸಿಗಬಹುದು ಎಂಬ ವಿಶ್ವಾಸವಿತ್ತು.

ಇಂದು ನ್ಯಾಯಾಧೀಶರು ಜಾಮೀನು ಮಂಜೂರು ಮಾಡಿದ್ದಾರೆ. ಯಾವ್ಯಾವ ಷರತ್ತು ವಿಧಿಸಿದ್ದಾರೆ ಎಂಬುದಕ್ಕೆ ಆದೇಶದ ಪ್ರತಿ ಇನ್ನೂ ನಮ್ಮ ಕೈ ಸೇರಿಲ್ಲ. ನಾಳೆ ಶ್ರೀಕಾಂತ್‌ ಪೂಜಾರಿ ಅವರ ಬಿಡುಗಡೆಯಾಗಲಿದೆ ಎಂದು ಹೇಳಿದರು. ಡಿಸೆಂಬರ್29 ರಂದು ಶ್ರೀಕಾಂತ್ ಪೂಜಾರಿಯನ್ನು ಪೊಲೀಸರು ಬಂಧಿಸಿದ್ದರು. ಶ್ರೀಕಾಂತ್‌ ಪೂಜಾರಿ ಬಂಧನವನ್ನು ಖಂಡಿಸಿ ಬಿಜೆಪಿ ರಾಜ್ಯವ್ಯಾಪಿ ಪ್ರತಿಭಟನೆ ನಡೆಸಿತ್ತು.

Loading

Leave a Reply

Your email address will not be published. Required fields are marked *