ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ – ಇಂದಿನ ದರಪಟ್ಟಿ ಇಲ್ಲಿದೆ!

ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ ಆಗಿದ್ದು, ಬೆಳ್ಳಿಯೂ ಇನ್ನಷ್ಟು ಅಗ್ಗವಾಗಿದೆ. ಚಿನ್ನದ ಬೆಲೆ ಗ್ರಾಮ್​ಗೆ ಬರೋಬ್ಬರಿ 60 ರೂನಷ್ಟು ಕುಸಿತ ಕಂಡಿದೆ. ಇತ್ತೀಚಿನ ತಿಂಗಳಲ್ಲಿ ಇದು ಕಂಡ ಅತಿದೊಡ್ಡ ಇಳಿಕೆ ಎನಿಸಿದೆ. ಬೆಳ್ಳಿ ಬೆಲೆ ಗ್ರಾಮ್​ಗೆ 15 ಪೈಸೆಯಷ್ಟು ಇಳಿಕೆ ಆಗಿದೆ.

ಬೆಂಗಳೂರು ಹೊರತುಪಡಿಸಿ ಉಳಿದ ಕಡಿಮೆ ಬೆಳ್ಳಿ ಸ್ವಲ್ಪ ಅಗ್ಗವಾಗಿದೆ. ವಿದೇಶಗಳಲ್ಲೂ ಬಹಳ ಕಡೆ ಚಿನ್ನದ ಬೆಲೆ ಇಳಿಕೆ ಮುಂದುವರಿದಿದೆ. ಅಮೆರಿಕದಂಥ ಕೆಲ ದೇಶಗಳಲ್ಲಿ ಯಥಾಸ್ಥಿತಿ ಇದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,000 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 62,180 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,400 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 57,000 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,285 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಫೆಬ್ರುವರಿ 15ಕ್ಕೆ)

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,000 ರೂ
24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,180 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 740 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,000 ರೂ
24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,180 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 728.50 ರೂ

Loading

Leave a Reply

Your email address will not be published. Required fields are marked *