ನವದೆಹಲಿ : ನಾನು ಕೂಡ ಡಿಸಿಎಂ ಸ್ಥಾನದ ಆಕಾಂಕ್ಷಿ ಎಂದು ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ ಹೇಳಿದ್ದಾರೆ.
ದೆಹಲಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ವಿಜಯಾನಂದ ಕಾಶಪ್ಪನವರ್ ಸಿಎಂ ಯಾರೂ ಬೇಕಾದರೂ ಆಗಲಿ , ನಮಗೂ ಒಂದು ಅವಕಾಶ ಕೊಡಿ ನಾನು ಕೂಡ ಡಿಸಿಎಂ ಸ್ಥಾನದ ಆಕಾಂಕ್ಷಿ ಎಂದು ಹೇಳಿದರು.
ಡಿಕೆಶಿ ಹಾಗೂ ಸಿದ್ದರಾಮಯ್ಯ ಯಾರೂ ಸಿಎಂ ಆದರೂ ತೊಂದರೆ ಇಲ್ಲ, ನಮಗೂ ಪ್ರಾತಿನಿಧ್ಯ ಕೊಡಬೇಕು. ನಾನು ಕೂಡ ಡಿಸಿಎಂ ಸ್ಥಾನದ ಆಕಾಂಕ್ಷಿ, ನಮಗೂ ಒಂದು ಅವಕಾಶ ಕೊಡಿ ಎಂದು ವಿಜಯಾನಂದ ಕಾಶಪ್ಪನವರ್ ಹೇಳಿದ್ದಾರೆ.