ಲೋಕಸಭಾ ಚುನಾವಣೆಯಲ್ಲಿ ತೇಜಸ್ವಿನಿ ಸ್ಪರ್ಧಿಸುವ ವಿಚಾರಕ್ಕೆ ಸಂಬಂಧಿಸಿ ಮೈಸೂರಿನಲ್ಲಿ ಬಿಜೆಪಿ ನಾಯಕಿ ತೇಜಸ್ವಿನಿ ಅನಂತಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಅನಂತಕುಮಾರ್ ಹಾದಿಯಲ್ಲಿ ಹೋಗುತ್ತಿದ್ದೇನೆ. ಯಾವುದೇ ಆಕಾಂಕ್ಷೆ ಇಟ್ಟುಕೊಂಡು ರಾಜಕಾರಣ ಮಾಡುತ್ತಿಲ್ಲ.
ಹಿಂದೆಯೂ ನಾನು ಟಿಕೆಟ್ ಕೇಳಿಲ್ಲ, ಈಗಲೂ ಕೇಳುವುದಿಲ್ಲ. ನಿರೀಕ್ಷೆಗಳನ್ನು ಇಟ್ಟುಕೊಂಡಿಲ್ಲ, ಟಿಕೆಟ್ ಕೊಟ್ಟರೆ ನೋಡೋಣ. ಎಲ್ಲದಕ್ಕೂ ಸಮಯ ಉತ್ತರ ಕೊಡುತ್ತೆ. ಪ್ರಧಾನಮಂತ್ರಿ ಮೋದಿ ಭೇಟಿ ಸೌಹಾರ್ದಯುತವಾದದ್ದು. ಚುನಾವಣಾ ಪ್ರಚಾರದ ವೇಳೆ ದೆಹಲಿಗೆ ಬರುವಂತೆ ಆಹ್ವಾನಿಸಿದ್ದರು. ಹೀಗಾಗಿ ಪ್ರಧಾನಿ ಮೋದಿ ಭೇಟಿಯಾಗಿದ್ದೆ ಎಂದರು.