ಗದಗ: ಲೋಕಸಭಾ ಚುನಾವಣೆ ಹತ್ತಿರವಾಗ್ತಿದ್ದಂತೆ ಟಿಕೇಟ್ ಆಕಾಂಕ್ಷಿಗಳು ಸಹ ಇದೀಗ ಫುಲ್ ಆಯಕ್ಟಿವ್ ಆಗಿದ್ದು ತಮಗೇ ಟಿಕೆಟ್ ನೀಡುವಂತೆ ವರಿಷ್ಠರ ಗಮನ ಸೆಳೀತಿದ್ದಾರೆ.
ಗದಗ ನಗರದ ಪತ್ರಿಕಾ ಭವನದಲ್ಲಿ ಹಾವೇರಿ-ಗದಗ ಲೋಕಸಭಾ ಕಾಂಗ್ರೆಸ್ ಟಿಕೇಟ್ ಆಕಾಂಕ್ಷಿ ಆರ್ ಎಂ ಕುಬೇರಪ್ಪ ಸುದ್ದಿಗೋಷ್ಠಿ ನಡೆಸಿ ನಾನು ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಪ್ರಭಲ ಆಕಾಂಕ್ಷಿಯಾಗಿದ್ದೇನೆ.
ಎರಡು ತಿಂಗಳಿನಿಂದ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ನಾಯಕರಿಗೆ ಭೇಟಿ ಮಾಡಿ ನನ್ನನ್ನು ಬೆಂಬಲಿಸುವಂತೆ ಮನವಿ ಮಾಡಿದ್ದೇನೆ. 8ತಾಲೂಕಿನ ಶಾಸಕರಿಗೆ ವಯಕ್ತಿಕವಾಗಿ ಭೇಟಿ ಮಾಡಿ ಬೆಂಬಲಿಸುವಂತೆ ಮನವಿ ಮಾಡಿದ್ದೇನೆ.
ಜಿ. ಪಂ, ತಾ. ಪಂ, ಗ್ರಾಂ. ಪಂ, ಬ್ಲಾಕ್ ಕಾಂಗ್ರೆಸ್ ಸದಸ್ಯರಿಗೆ ಸುಮಾರು 10ಸಾವಿರ ಪತ್ರಗಳನ್ನು ಬರೆದಿದ್ದೇನೆ. ಜೊತೆಗೆ ಎಐಸಿಸಿ ಮುಖಂಡರಿಗೂ ಟಿಕೆಟ್ ನೀಡುವಂತೆ ಮನವಿ ಸಲ್ಲಿಸಿದ್ದೇನೆ ಅಂದ್ರು.