ಮೆಗಾಸ್ಟಾರ್ ಮನೆಮಗಳು ನಿಹಾರಿಕಾ ಕೊನಿಡೆಲಾ- ಚೈತನ್ಯ ಜಿವಿ ಡಿವೋರ್ಸ್ ಆಗಿರೋದು ಕನ್ಪಾರ್ಮ್ ಆಗಿದೆ. ಕೆಲ ತಿಂಗಳುಗಳಿಂದ ನಿಹಾರಿಕಾ ಹಾಗೂ ಚೈತನ್ಯ ಜೀವನ ಸರಿಯಿಲ್ಲ ಎಂಬ ಸುದ್ದಿ ಹರಿದಾಡಿತ್ತು. ಆದ್ರೆ ಈ ಬಗ್ಗೆ ಎಲ್ಲಿಯೂ ಕ್ಲಾರಿಟಿ ಇರಲಿಲ್ಲ. ಇದೀಗ ಈ ಎಲ್ಲಾ ಸುದ್ದಿಗೂ ನಟಿ ನಿಹಾರಿಕಾ, ತಮ್ಮ ಸೋಷಿಯಲ್ ಮೀಡಿಯಾ ಮೂಲಕ ಉತ್ತರಿಸಿದ್ದಾರೆ.
ಪತಿಯಿಂದ ಬೇರೆ ಆಗಿರೋದ್ದರ ಕುರಿತು ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ.
ಮೆಗಾಸ್ಟಾರ್ ಮನೆ ಮಗಳು, ನಟಿ ನಿಹಾರಿಕಾ ಅವರ ಮದುವೆಯನ್ನ ರಾಜಸ್ಥಾನದಲ್ಲಿ ಅದ್ದೂರಿಯಾಗಿ ಮಾಡಿಕೊಟ್ಟಿದ್ದರು. ಹಲವು ವರ್ಷಗಳ ಪ್ರೀತಿ, ಎರಡೂವರೆ ವರ್ಷದ ದಾಂಪತ್ಯಕ್ಕೆ ಇದೀಗ ಬ್ರೇಕ್ ಬಿದ್ದಿದೆ. ನಿಹಾರಿಕಾ- ಚೈತನ್ಯ ಇಬ್ಬರು ಡಿವೋರ್ಸ್ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ನಾನು- ಚೈತನ್ಯ ಬೇರೆಯಾಗಬೇಕು ಎಂದು ನಿರ್ಧರಿಸಿದ್ದೇವೆ. ಇಂತಹ ಕಠಿಣ ಸಂದರ್ಭದಲ್ಲಿ ನಮ್ಮ ಜೊತೆಯಾಗಿರೋದ್ದಕ್ಕೆ ಕುಟುಂಬದವರಿಗೆ ಮತ್ತು ಸ್ನೇಹಿತರಿಗೆ ಧನ್ಯವಾದಗಳು. ಹೊಸ ಜೀವನಕ್ಕೆ ಕಾಲಿಡಲು ನಮ್ಮ ಪ್ರೈವೆಸಿಯನ್ನ ಗೌರವಿಸಿ ಎಂದು ನಟಿ ಪೋಸ್ಟ್ ಮೂಲಕ ತಿಳಿಸಿದ್ದಾರೆ. ಈ ಮೂಲಕ ಕಾಮೆಂಟ್ ಬಾಕ್ಸ್ ಆಫ್ ಮಾಡಿ, ಡಿವೋರ್ಸ್ ಆಗಿರೋದನ್ನ ನಟಿ ಒಪ್ಪಿಕೊಂಡಿದ್ದಾರೆ.
ನಟ ಚಿರಂಜೀವಿ ಸಹೋದರ, ನಟ ನಾಗ ಬಾಬು ಪುತ್ರಿ ನಿಹಾರಿಕಾ ಕೊನಿಡೆಲಾ ಮದುವೆಯನ್ನು ಪ್ರಭಾಕರ್ ರಾವ್ ಅವರ ಪುತ್ರ ಚೈತನ್ಯ ಜೊನ್ನಲಗಡ್ಡ ಅವರ ಜೊತೆ 2020ರ ಡಿಸೆಂಬರ್ 9ರಂದು ನಡೆದಿತ್ತು. ರಾಜಸ್ಥಾನದ ಉದಯಪುರದಲ್ಲಿನ ಒಬೆರಾಯ್ ಉದಯ್ ವಿಲಾಸ್ನಲ್ಲಿ ಅದ್ದೂರಿಯಾಗಿ ನಡೆದಿತ್ತು. ಇಡೀ ಮೆಗಾ ಸ್ಟಾರ್ ಕುಟುಂಬವು ಮದುವೆಗೆ ಹಾಜರಾಗಿತ್ತು. ಈ ಮದುವೆಯಲ್ಲಿ ಇಡೀ ಕುಟುಂಬವು ಹಾಡಿ ಕುಣಿದಿತ್ತು. ಆದರೆ ನಿಹಾರಿಕಾ ಅವರ ಮದುವೆ ಕೇವಲ ಎರಡೂವರೆ ವರ್ಷಗಳಲ್ಲಿ ಮುರಿದುಬಿದ್ದಿರುವ ಸುದ್ದಿ ಚಿರಂಜೀವಿ ಅಭಿಮಾನಿಗಳು ಬೇಸರಗೊಂಡಿದ್ದಾರೆ.