ಬೆಂಗಳೂರು: ಕಾಂಗ್ರೆಸ್ ನಿಂದ ಸಂಸ್ಕೃತಿ ಕಲಿಯಬೇಕಿಲ್ಲ ಎಂದಿರುವ ಬಿಜೆಪಿಯ ಅನಂತಕುಮಾರ್ ಹೆಗಡೆ ಅವರ ಹೇಳಿಕೆಗೆ ಡಿಸಿಎಂ ಡಿ ಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಬಿಜೆಪಿ ನಾಯಕರೇ ಅನಂತಕುಮಾರ್ ಹೆಗಡೆ ಅವರಿಗೆ ಉತ್ತರ ಕೊಟ್ಟಿದ್ದಾರೆ. ಅವರ ಹೇಳಿಕೆ ಸರಿ ಇಲ್ಲ ಎಂದಿದ್ದಾರೆ.
ನಾನು ಅವರಿಗೆ ಉತ್ತರ ಕೊಡುವ ಅವಶ್ಯಕತೆಯಿಲ್ಲ ಎಂದು ಮಧ್ಯಮಗಳ ಪ್ರಶ್ನೆಗೆ ಶೇಷಾದ್ರಿಪುರದಲ್ಲಿ,
ಮಂಗಳವಾರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಅನಂತಕುಮಾರ್ ಹೆಗಡೆ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಏಕವಚನದಲ್ಲಿ ನಿಂದಿಸಿದ್ದರು. ಹೆಗಡೆ ಅವರ ಮಾನಸಿಕ ಆರೋಗ್ಯ ಸರಿ ಇಲ್ಲ ಎಂದು ಡಿಸಿಎಂ ಅವರು ಹಿಂದೆ ತಿರುಗೇಟು ನೀಡಿದ್ದನ್ನು ಸ್ಮರಿಸಬಹುದು.