ನನಗೂ ಪಕ್ಷದ ಕೆಲ ವಿಚಾರಗಳಿಗೆ ಸಂಬಂಧಿಸಿದಂತೆ ಅಸಮಾಧಾನ ಇತ್ತು: ಎಂ.ಪಿ. ರೇಣುಕಾಚಾರ್ಯ

ದಾವಣಗೆರೆ: ಬಿಜೆಪಿ ಬಿಟ್ಟು ಶಾಸಕರು, ಮಾಜಿ ಶಾಸಕರು, ಮುಖಂಡರು ಯಾರೂ ಕಾಂಗ್ರೆಸ್ ಗೆ ಹೋಗುವುದಿಲ್ಲ. ಬಿ. ವೈ. ವಿಜಯೇಂದ್ರ ಯಡಿಯೂರಪ್ಪ ಅವರು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾದ ಬಳಿಕ ಎಲ್ಲವೂ ಸರಿ ಹೋಗುತ್ತಿದೆ. ಅಸಮಾಧಾನಿತರ ಜೊತೆ ವಿಜಯೇಂದ್ರ ಅವರು ಮಾತುಕತೆ ನಡೆಸಿದ್ದು, ಹಾಗಾಗಿ, ಯಾರೂ ಹೋಗುವುದಿಲ್ಲ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ವಿಶ್ವಾಸ ವ್ಯಕ್ತಪಡಿಸಿದರು.

ದಾವಣಗೆರೆಯಲ್ಲಿ ನಡೆದ  ಪತ್ರಿಕಾಗೋಷ್ಛಿಯಲ್ಲಿ ಮಾತನಾಡಿದ ಅವರು, ಬಿಜೆಪಿಯಿಂದ ಕಾಂಗ್ರೆಸ್ ಗೆ ವಲಸೆ ಹೋಗುತ್ತಾರೆ ಎಂಬ ವದಂತಿ ಹಬ್ಬಿತ್ತು. ಆದ್ರೆ, ಈಗ ಎಲ್ಲವೂ ಶಮನವಾಗಿಲ್ಲ. ನನಗೂ ಪಕ್ಷದ ಕೆಲ ವಿಚಾರಗಳಿಗೆ ಸಂಬಂಧಿಸಿದಂತೆ ಅಸಮಾಧಾನ ಇತ್ತು. ಹಾಗೆಂದ ಮಾತ್ರಕ್ಕೆ ಬಿಜೆಪಿ ಬಿಡ್ತೀನಿ ಎನ್ನುವುದು ಸರಿಯಲ್ಲ. ನಾನು ಸಹ ಎಲ್ಲಿಯೂ ಕಾಂಗ್ರೆಸ್ ಗೆ ಹೋಗುತ್ತೀನಿ ಎಂದು ಹೇಳಿಲ್ಲ.

ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪರ ನೇತೃತ್ವದಲ್ಲಿ ಲೋಕಸಭೆ ಚುನಾವಣೆ ಎದುರಿಸಬೇಕು ಹಾಗೂ ಬಿ. ವೈ. ವಿಜಯೇಂದ್ರ ರಾಜ್ಯ ಘಟಕದ ಅಧ್ಯಕ್ಷರಾಗಬೇಕು ಎಂಬ ಅಪೇಕ್ಷೆ ಇತ್ತು. ಅದು ಈಡೇರಿದೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯು 28 ಕ್ಷೇತ್ರಗಳಲ್ಲಿಯೂ ಜಯ ಗಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Loading

Leave a Reply

Your email address will not be published. Required fields are marked *