ಕೊಪ್ಪಳ: ನಾನು ಬಿಜೆಪಿಯಲ್ಲೇ ಇರುತ್ತೇನೆ, ಕಾಂಗ್ರೆಸ್ ಸೇರಲ್ಲ ಎಂದು ಕೊಪ್ಪಳದಲ್ಲಿ ಬಿಜೆಪಿ ಸಂಸದ ಸಂಗಣ್ಣ ಕರಡಿ ಹೇಳಿಕೆ ನೀಡಿದರು. ನಾನು ಲೋಕಸಭೆ ಚುಣಾವಣೆಯಲ್ಲಿ ಮತ್ತೆ ಸ್ಪರ್ಧಿಸುತ್ತೇನೆ. ಬೇಕಾದ್ರೇ ರಕ್ತದಲ್ಲಿ ಬರೆದು ಕೊಡುತ್ತೇನೆ ಕಾಂಗ್ರೆಸ್ ಸೇರಲ್ಲ. ಲೋಕಸಭಾ ಚುನಾವಣೆಗೆ ಟಿಕೆಟ್ ನೀಡುತ್ತೆ ಎಂಬ ವಿಶ್ವಾಸ ಇದೆ. ಟಿಕೆಟ್ ನೀಡದಿದ್ದರೂ ಪಕ್ಷದ ಪರವಾಗಿ ಕೆಲಸ ಮಾಡ್ತೇನೆ. ಕುಷ್ಟಗಿ ಕ್ಷೇತ್ರದ ಶಾಸಕ ದೊಡ್ಡನಗೌಡ ಬಿಜೆಪಿ ಬಿಡುವುದಿಲ್ಲ ಎಂದರು.