ಚಿಕ್ಕಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಗ್ಗೆ ಬಾಯಿಗೆ ಬಂದಂತೆ ಮಾತನಾಡುತ್ತಿರುವ ಸಂಸದ ಪ್ರತಾಪ್ ಸಿಂಹ ಬಾಯಿ ಮುಚ್ಚಿಕೊಂಡಿದ್ದರೆ ಸರಿ, ಇಲ್ಲವಾದಲ್ಲಿ ಇಡೀ ಕಾಂಗ್ರೆಸ್ ಪಾಳಯ ಮೈಸೂರಿಗೆ ಇಳಿಯಬೇಕಾಗುತ್ತದೆ ಎಂದು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಎಚ್ಚರಿಕೆ ನೀಡಿದ್ದಾರೆ.
ಇದೇವೇಳೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಮಾಜಿ ಸಚಿವ ಡಾ ಕೆ ಸುಧಾಕರ್ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದರೆ, ತಾನು ಕಾಂಗ್ರೆಸ್ ನಿಂದ ಕಣಕ್ಕಿಳಿಯಲು ಸಿದ್ಧ ಎಂದು ತಿಳಿಸಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು ಪ್ರತಾಪ್ ಸಿಂಹ ಅವರ ವಿರುದ್ಧ ವಾಗ್ದಾಳಿ ನಡೆಸಿದರು. ಪ್ರತಾಪ್ ಸಿಂಹ ಒಬ್ಬ ದೊಡ್ಡ ಅಯೋಗ್ಯ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಗ್ಗೆ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಬಾಯಿ ಮುಚ್ಕಂಡು ಸುಮ್ಮನಿದ್ದರೆ ಸರಿ. ಇಲ್ಲವಾದಲ್ಲಿ ಇಡೀ ಕಾಂಗ್ರೆಸ್ ಪಾಳಯ ಮೈಸೂರಿಗೆ ಇಳಿಯಬೇಕಾಗುತ್ತೆ ಎಂದರು.