ಬೆಂಗಳೂರು: ಶಿವಮೊಗ್ಗದಲ್ಲಿ ಬಿಜೆಪಿಗೆ ವೋಟ್ ಹಾಕಿದ್ದಕ್ಕೆ ಆಟೋ ಚಾಲಕನ ಮೇಲೆ ಹಲ್ಲೆ, ಯಾದಗಿರಿಯಲ್ಲಿ, ಹೊಸಕೋಟೆಯಲ್ಲಿ ಬಿಜೆಪಿ ಕಾರ್ಯಕರ್ತನ ಕೊಲೆಗಳು ನಡೆದಿದ್ದವು. ನಮ್ಮ ಕಾರ್ಯಕರ್ತರ ಸಹನೆ ಮೀರಿದರೇ, ಅದಕ್ಕೆ ರಾಜ್ಯ ಸರ್ಕಾರವೇ ಹೊಣೆ ಎಂಬುದಾಗಿ ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಎಚ್ಚರಿಸಿದ್ದಾರೆ.
ಇಂದು ಈ ಬಗ್ಗೆ ಟ್ವಿಟ್ ಮಾಡಿರುವಂತ ಅವರು, ಪ್ರಜಾಪ್ರಭುತ್ವದಲ್ಲಿ ಗೆಲುವು, ಸೋಲು ಸಾಮಾನ್ಯ. ಆದರೆ ಗೆಲುವಿನ ಮದದಲ್ಲಿ ಕಾಂಗ್ರೆಸ್ ಗೂಂಡಾಗಳು ಭಾಜಪಾ ಕಾರ್ಯಕರ್ತರ ಪ್ರಾಣಹಾನಿ, ಆಸ್ತಿಪಾಸ್ತಿ ನಷ್ಟ ಉಂಟು ಮಾಡುವುದನ್ನು ನೋಡಿಯೂ ಪೊಲೀಸ್ ಇಲಾಖೆ ಕ್ರಮ ತೆಗೆದುಕೊಳ್ಳದೆ ಹೋದರೆ ನಮ್ಮ ಕಾರ್ಯಕರ್ತರ ಸಹನೆ ಮೀರಿದರೆ ಅದಕ್ಕೆ ರಾಜ್ಯ ಸರಕಾರವೇ ಹೊಣೆ ಎಂಬುದಾಗಿ ಹೇಳಿದ್ದಾರೆ.