ಮೈಸೂರು: ತಮಿಳುನಾಡಿಗೆ ಮತ್ತೆ ಐದು ಸಾವಿರ ಕ್ಯೂಸೆಕ್ ನೀರು ಬಿಡಲು ಆದೇಶ ವಿಚಾರವಾಗಿ ಮಾತನಾಡಿದ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ತೀರ್ಪು ಅವೈಜ್ಞಾನಿಕ ಅವಾಸ್ತವಿಕ. ತೀರ್ಪು ಕೊಡುವ ಮುನ್ನ ರಾಜ್ಯಕ್ಕೆ ಅಧಿಕಾರಿಗಳು ಭೇಟಿ ನೀಡಬೇಕಿತ್ತು. ನವದೆಹಲಿಯಲ್ಲಿ ಕೈಗೊಂಡಿರುವ ತೀರ್ಮಾನ ಏಕಪಕ್ಷೀಯವಾದದ್ದು, ಇದನ್ನು ರಾಜ್ಯ ಸರ್ಕಾರ ಖಡಾಖಂಡಿತವಾಗಿ ತಿರಸ್ಕರಿಸಬೇಕು. ಸುಪ್ರೀಂಕೋರ್ಟ್ನಲ್ಲಿ ರಾಜ್ಯ ಸರ್ಕಾರ ಮೇಲ್ಮನವಿಯನ್ನು ಸಲ್ಲಿಸಬೇಕು. ಸರ್ವಪಕ್ಷಗಳ ನಿಲುವಿಗೆ ರಾಜ್ಯ ಸರ್ಕಾರ ಬದ್ಧರಾಗಿರಬೇಕು. ಒಂದು ವೇಳೆ ತಮಿಳುನಾಡಿಗೆ ನೀರು ಬಿಟ್ಟರೆ ರಸ್ತೆಗಿಳಿದು ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.