ಬೆಂಗಳೂರು: ಕಾಂಗ್ರೆಸ್ ಪಕ್ಷದ ( Congress Party ) ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ವಿಚಾರದಲ್ಲಿ ರಾಜ್ಯದ ಜನರಿಗೆ ಯಾವುದೇ ಸಂಶಯ ಬೇಡ. ಈ ಐದು ಗ್ಯಾರಂಟಿಗಳನ್ನು ಜಾರಿಗೊಳಿಸುವ ಬಗ್ಗೆ ಅಗತ್ಯ ಮಾಹಿತಿ ಸಂಗ್ರಹಿಸಲು ಹೇಳಿದ್ದೇನೆ.
ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಅನುಮೋದಿಸಿ, ಆವತ್ತಿನಿಂದಲೇ ಜಾರಿಗೆ ಬರುವಂತೆ ಆದೇಶ ಮಾಡಲಾಗುವುದು ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ( Chief Minister Siddaramaiah ) ತಿಳಿಸಿದ್ದಾರೆ.
ನಗರದ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದಂತ ಅವರು, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನಮ್ಮ ಐದು ಗ್ಯಾರಂಟಿಗಳ ಬಗ್ಗೆ ಜನರ ನಿರೀಕ್ಷೆ ಹುಸಿಯಾಗಿದೆ ಎಂದು ಹೇಳಿದ್ದಾರೆ. ಮಿಸ್ಟರ್ ಬೊಮ್ಮಾಯಿ ಅವರೇ ನಿಮಗೂ ಯಾವುದೇ ಅನುಮಾನ ಬೇಡ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಎಲ್ಲಾ ಐದು ಗ್ಯಾರಂಟಿ ಯೋಜನೆಗಳನ್ನು ಮತ್ತೊಮ್ಮೆ ಸ್ವೀಕರಿಸಿ ಅಂದಿನಿಂದಲೇ ಜಾರಿಗೊಳಿಸುತ್ತೇವೆ ಎಂದರು.