ನಾಳೆ ಮಹತ್ವದ ಕಾಂಗ್ರೆಸ್ ಶಾಸಕಾಂಗ ಸಭೆ: ಸಿಎಂ ಹೆಸರು ಘೋಷಣೆ ಸಾಧ್ಯತೆ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ. ಸ್ಪಷ್ಟ ಬಹುಮತವನ್ನು ಪಡೆದಿರುವ ಹಿನ್ನಲೆಯಲ್ಲಿ ಈಗ ಸರ್ಕಾರ ರಚನೆಯ ಕಸರತ್ತು ಆರಂಭಗೊಂಡಿದೆ. ಇದಕ್ಕಾಗಿ ನಾಳೆ ಮಹತ್ವದ ಕಾಂಗ್ರೆಸ್ ಶಾಸಕಾಂಗ ಸಭೆಯನ್ನು ಕರೆಯಲಾಗಿದೆ.

ಈ ಸಭೆಯಲ್ಲಿ ಸಿಎಂ ಹೆಸರು ಘೋಷಣೆ ಮಾಡುವ ಸಾಧ್ಯತೆ ಇದೆ.

ಈ ಕುರಿತಂತೆ ಕಾಂಗ್ರೆಸ್ ಮೂಲಗಳಿಂದ ಮಾಹಿತಿ ತಿಳಇದು ಬಂದಿದ್ದು, ನಾಳೆ ಕಾಂಗ್ರೆಸ್ ಶಾಸಕಾಂಗ ಸಭೆಯನ್ನು ಕರೆಯಲಾಗಿದೆ. ಈ ಸಭೆಯಲ್ಲಿ ಮುಖ್ಯಮಂತ್ರಿಯಾಗಿ ಯಾರನ್ನು ಆಯ್ಕೆ ಮಾಡಬೇಕು ಎನ್ನುವ ಬಗ್ಗೆ ಬಿಸಿ ಬಿಸಿ ಚರ್ಚೆ ನಡೆಸಲಾಗುತ್ತದೆ.

ಕಾಂಗ್ರೆಸ್ ಪಕ್ಷದ ಸಿಎಂ ರೇಸ್ ನಲ್ಲಿ ಸಿದ್ಧರಾಮಯ್ಯ ವರ್ಸಸ್ ಡಿಕೆ ಶಿವಕುಮಾರ್ ನಡುವೆ ಒಳಗೊಳಗೆ ಫೈಟ್ ನಡೆಯುತ್ತಿದೆ ಎನ್ನಲಾಗುತ್ತಿದೆ. ಆದ್ರೇ ಈ ಬಗ್ಗೆ ನಾಳೆ ನಡೆಯಲಿರುವಂತ ಶಾಸಕಾಂಗ ಪಕ್ಷದ ಸಭೆಯಲ್ಲಿ ಸ್ಪಷ್ಟ ಮಾಹಿತಿ ಹೊರ ಬೀಳಲಿದೆ.

ಅಂದಹಾಗೇ ಈವರೆಗೆ ದೊರೆತಂತ ಮಾಹಿತಿಯಂತೆ ಬಿಜೆಪಿ 65, ಕಾಂಗ್ರೆಸ್ 132, ಜೆಡಿಎಸ್ 21 ಹಾಗೂ ಇತರೆ 6 ಸ್ಥಾನಗಳಲ್ಲಿ ಮುನ್ನಡೆಯನ್ನು ಸಾಧಿಸಲಾಗಿದೆ. ಕೆಲ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಗೆಲುವು ಕಂಡಿದ್ದಾರೆ. ಆ ಬಗ್ಗೆ ಚುನಾವಣಾ ಆಯೋಗವು ಅಧಿಕೃತ ಘೋಷಣೆ ಮಾಡುವುದು ಬಾಕಿ ಇದೆ.

Loading

Leave a Reply

Your email address will not be published. Required fields are marked *