ನವದೆಹಲಿ : ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) 2,000 ರೂ.ಗಳ ನೋಟುಗಳನ್ನ ಹಿಂತೆಗೆದುಕೊಳ್ಳುವುದಾಗಿ ಘೋಷಿಸಿದೆ. 2,000 ಮುಖಬೆಲೆಯ ನೋಟುಗಳನ್ನ ತಕ್ಷಣದಿಂದ ಜಾರಿಗೆ ಬರುವಂತೆ ಬಿಡುಗಡೆ ಮಾಡುವುದನ್ನ ನಿಲ್ಲಿಸುವಂತೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕುಗಳಿಗೆ ಸಲಹೆ ನೀಡಿದೆ.
ಆದಾಗ್ಯೂ, 2,000 ರೂ.ಗಳ ಮುಖಬೆಲೆಯ ನೋಟುಗಳು ಕಾನೂನುಬದ್ಧವಾಗಿ ಮುಂದುವರಿಯುತ್ತವೆ.
ಮಾಹಿತಿಯ ಪ್ರಕಾರ, ಕ್ಲೀನ್ ನೋಟ್ ಪಾಲಿಸಿ ಅಡಿಯಲ್ಲಿ ಆರ್ಬಿಐ ಈ ನಿರ್ಧಾರವನ್ನ ತೆಗೆದುಕೊಂಡಿದೆ. ಈ ನೋಟುಗಳು ಸೆಪ್ಟೆಂಬರ್ 30 ರವರೆಗೆ ಕಾನೂನುಬದ್ಧವಾಗಿ ಮಾನ್ಯವಾಗಿರುತ್ತವೆ ಎಂದು ಆರ್ಬಿಐ ಹೇಳಿದೆ.