ಬೆಂಗಳೂರು: ರಾಮಮಂದಿರ ಉದ್ಘಾಟನೆ ಒನ್ ಮ್ಯಾನ್ ಶೋ ಆಗುತ್ತಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಮಾತನಾಡಿದ ಅವರು, ರಾಮಮಂದಿರ ಉದ್ಘಾಟನೆಗೆ ಯಾವ ರಾಜ್ಯದ ಮುಖ್ಯಮಂತ್ರಿಗಳಿಗೂ ಆಹ್ವಾನ ನೀಡಿಲ್ಲ,
ಉತ್ತರ ಪ್ರದೇಶ ಸಿಎಂಗೆ ಮಾತ್ರ ಆಹ್ವಾನ ನೀಡಿಲಾಗಿದೆ ಎಂದರು. ಒಂದು ವೇಳೆ ನನಗೆ ಆಹ್ವಾನ ಬಂದ್ರೆ ಸದ್ಯ ಹೋಗಲ್ಲ. ನಮ್ಮ ಊರಿನಲ್ಲಿ ರಾಮಮಂದಿರ ಇದೆ, ಅಲ್ಲೇ ಪೂಜೆ ಮಾಡುತ್ತೇನೆ. ಸದ್ಯ ಅಯೋಧ್ಯೆಯಲ್ಲಿ ತುಂಬಾ ರಶ್ ಇರುತ್ತದೆ. ಮುಂದೆ ಯಾವಾಗದರೂ ಹೋಗೊಣ ಎಂದರು.
ಹುಬ್ಬಳ್ಳಿಯಲ್ಲಿ ಕರಸೇವಕನ ಬಂಧನ ವಿಚಾರವಾಗಿ ಬಿಜೆಪಿ ಪ್ರತಿಭಟನೆ ಕುರಿತಾಗಿ ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ಪೊಲೀಸರು ಹಳೇ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಮಾಡಿದ್ದಾರೆ. ಈ ವಿಚಾರವಾಗಿ ರಾಜಕೀಯ ಪಕ್ಷಗಳು ಏನು ಮಾಡಲು ಆಗಲ್ಲ. ನಾವೊಂದು ಹೇಳುವುದು, ಅವರೊಂದುಹೇಳುವುದು ಸರಿಯಲ್ಲ. ಕಾನೂನು ಹೋರಾಟ ಮಾಡಲಿ ಎಂದು ಸಲಹೆ ನೀಡಿದರು.