ಉತ್ತರಾಖಂಡದಲ್ಲಿ ರಾತ್ರಿ ಸುರಿದ ತೀವ್ರ ಮಳೆಗೆ ಅನೇಕ ಮನೆಗಳು ಮುಳುಗಡೆ

ಡೆಹ್ರಾಡೂನ್: ಉತ್ತರಾಖಂಡದಲ್ಲಿ  ಭಾರೀ ಮಳೆಯಾಗುತ್ತಿದ್ದು, ಮಳೆಯ ಪರಿಣಾಮ ಋಷಿಕೇಶದ  ಧಲ್ವಾಲ ಮತ್ತು ಖಾರಾ ಪ್ರದೇಶಗಳು ಜಲಾವೃತವಾಗಿದೆ. ರಾತ್ರಿ ಸುರಿದ ತೀವ್ರ ಮಳೆಯ ಪರಿಣಾಮ ಅನೇಕ ಮನೆಗಳು ಮುಳುಗಡೆಯಾಗಿದ್ದು, ಧಲ್ವಾಲ ಮತ್ತು ಖಾರದಲ್ಲಿ ನೀರಿನಲ್ಲಿ ಮುಳುಗಿರುವ ಮನೆಗಳಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ರಾಜ್ಯ ವಿಪತ್ತು ನಿರ್ವಹಣಾ ಪಡೆಯನ್ನು ಕರೆಸಲಾಗಿದೆ.
ಎಸ್ಡಿಆರ್ಎಫ್ ತಂಡ ರಾತ್ರಿಯೇ ಸ್ಥಳಕ್ಕೆ ಆಗಮಿಸಿ ಮುಳುಗಿದ್ದ ಮನೆಗಳಿಂದ ಸುಮಾರು 50 ಜನರನ್ನು ರಕ್ಷಿಸಿ ತೆಪ್ಪದ ಮೂಲಕ ಸುರಕ್ಷಿತ ಸ್ಥಳಕ್ಕೆ ಕರೆದೊಯ್ದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಋಷಿಕೇಶ ಪ್ರದೇಶದಲ್ಲಿ ನೀರಿನ ಮಟ್ಟ ಏರಿಕೆಯಾಗಿರುವುದರಿಂದ ಜನರ ಮನೆಗಳಿಗೆ ನೀರು ನುಗ್ಗಿದ್ದು, ಮನೆಯೊಳಗೆ ಸಿಲುಕಿದವರ ರಕ್ಷಣೆಗೆ ಎಸ್ಡಿಆರ್ಎಫ್ ತಂಡದ ಅಗತ್ಯವಿದೆ ಎಂದು ಎಸ್ಡಿಆರ್ಎಫ್ಗೆ ಮನವಿ ಮಾಡಿದ ಹಿನ್ನೆಲೆ ಎಸ್ಡಿಆರ್ಎಫ್ ತಂಡ ಸ್ಥಳದಲ್ಲಿ ರಕ್ಷಣಾ ಕಾರ್ಯ ಕೈಗೊಂಡಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ವಿಪತ್ತು ನಿರ್ವಹಣಾ ಕೇಂದ್ರವು ರಾಜ್ಯದ ಮಳೆ ಪರಿಸ್ಥಿತಿಯನ್ನು ಪರಿಶೀಲಿಸಿದೆ ಎಂದು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ  ಬುಧವಾರ ತಿಳಿಸಿದ್ದಾರೆ. ಅಲ್ಲದೇ ಚಾರ್ಧಾಮ್ ಯಾತ್ರಾರ್ಥಿಗಳು ಹವಾಮಾನದ ಬಗ್ಗೆ ಮಾಹಿತಿಯನ್ನು ಪಡೆದ ಬಳಿಕ ಪ್ರಯಾಣವನ್ನು ಮುಂದುವರಿಸಲು ಸಲಹೆ ನೀಡಿದರು.

Loading

Leave a Reply

Your email address will not be published. Required fields are marked *