ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಚುನಾವಣೆಗಳಲ್ಲಿ ಹೆಚ್ಚುತ್ತಿರುವ ಹಣದ ಪ್ರಭಾವದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಬೆಂಗಳೂರಿನ ಗಾಂಧಿ ಭವನದಲ್ಲಿ ಮಾತನಾಡಿದ ಅವರು, ಚುನಾವಣೆಗಳಲ್ಲಿ ಹೆಚ್ಚುತ್ತಿರುವ ಹಣದ ಪ್ರಭಾವದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಈ ಪರಿಸ್ಥಿತಿ ಪ್ರಜಾಪ್ರಭುತ್ವವನ್ನು ಹಳಿತಪ್ಪಿಸುವ ಸಾಧ್ಯತೆಯಿರುವುದರಿಂದ ಜನರು ಈ ಬಗ್ಗೆ ಗಂಭೀರವಾಗಿ ಯೋಚಿಸಬೇಕು ಎಂದು ಕರೆ ನೀಡಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಹಣವು ಹೇಗೆ ಅಪಾಯಕಾರಿ ಪಾತ್ರವನ್ನು ವಹಿಸುತ್ತಿದೆ ಎಂಬುದಕ್ಕೆ ಇತ್ತೀಚಿನ ಚುನಾವಣೆ ಉದಾಹರಣೆಯಾಗಿದೆ. ಪ್ರಜಾಪ್ರಭುತ್ವ ಎಲ್ಲಿಗೆ ಹೋಗುತ್ತಿದೆ ಎಂಬುದರ ಬಗ್ಗೆ ಗಂಭೀರ ಆತ್ಮಾವಲೋಕನ ಮಾಡಿಕೊಳ್ಳಬೇಕು. ಅದನ್ನು ತಡೆಯಲು ಹೋರಾಟ ನಡೆಸಬೇಕು ಎಂದು ಒತ್ತಾಯಿಸಿದ ಅವರು ಚುನಾವಣಾ ಆಯೋಗದ ಕಾರ್ಯವೈಖರಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.