ಏಷ್ಯಾ ಕಪ್ 2023 ಕ್ಕೆ ಸಂಬಂಧಿಸಿದಂತೆ ಬಿಸಿಸಿಐ ಮತ್ತು ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ನಡುವೆ ನಡೆಯುತ್ತಿರುವ ಬಿಕ್ಕಟ್ಟಿನ ಮಧ್ಯೆ, ಮುಂಬರುವ ಏಕದಿನ ವಿಶ್ವಕಪ್ 2023 ಗಾಗಿ ಭಾರತ ಪ್ರವಾಸ ಮಾಡಲು ಪಿಸಿಬಿ ಒಪ್ಪಿಕೊಂಡಿದೆ ಎಂದು ವರದಿಯಾಗಿದೆ.
ಕ್ರಿಕ್ಬಝ್ ಪ್ರಕಾರ, ಭಾರತ ಮತ್ತು ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ದಿನಾಂಕ ನಿಗದಿಯಾಗಿದ್ದು, 2023ರ ಅಕ್ಟೋಬರ್ 15ರಂದು ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದೆ.
ಈ ಪಂದ್ಯವು 2023ರ ಅಕ್ಟೋಬರ್ ಮತ್ತು ನವೆಂಬರ್ನಲ್ಲಿ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ನ ಭಾಗವಾಗಿದೆ.
ಭಾರತವು ತನ್ನ ಪಂದ್ಯಾವಳಿಯ ಆರಂಭಿಕ ಪಂದ್ಯವನ್ನ ಆಸ್ಟ್ರೇಲಿಯಾ ವಿರುದ್ಧ ಆಡಲಿದೆ, ಮತ್ತು ಅದರ ಸ್ಥಳವು ಚೆನ್ನೈ ಆಗಿರಬಹುದು. ಇದಲ್ಲದೆ, ಅಕ್ಟೋಬರ್ 15 ರಂದು ಭಾರತ ಮತ್ತು ಪಾಕಿಸ್ತಾನ ಪರಸ್ಪರ ಮುಖಾಮುಖಿಯಾಗಲಿವೆ ಎಂದು ವರದಿ ಹೇಳುತ್ತದೆ.