ಬೆಂಗಳೂರು : ಕರ್ನಾಟಕದಲ್ಲಿ ಈ ಬಾರಿಯಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರೋದು ನಿಶ್ಚಿತ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಈ ಬಾರಿ ಬಿಜೆಪಿ ಸರ್ಕಾರವೇ ಅಧಿಕಾರಕ್ಕೆ ಬರಲಿದೆ.
ರಾಜ್ಯದಲ್ಲಿ ಪ್ರಕಟವಾಗಿರುವ ಸಮೀಕ್ಷೆಗಳನ್ನು ಸುಳ್ಳಾಗಲಿವೆ. ನಮ್ಮ ವರದಿಯ ಪ್ರಕಾರ 120 ರಿಂದ 125 ಸ್ಥಾನಗಳಲ್ಲಿ ಗೆದ್ದು ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದ್ದಾರೆ.
ನಾವು ರಾಜ್ಯದಲ್ಲಿ ಸ್ವಂತ ಬಿಜೆಪಿ ಸರ್ಕಾರ ರಚನೆ ಮಾಡುತ್ತೇವೆ. ನಮ್ಮ ಕಾರ್ಯಕರ್ತರು ಸಮೀಕ್ಷೆ ಸುಳ್ಳು ಮಾಡೋ ಕಲಸ ಮಾಡಿದ್ದಾರೆ. ಹೀಗಾಗಿ ಸಮೀಕ್ಷೆಗಳ ಮೇಲೆ ನಮಗೆ ಗ್ಯಾರಂಟಿ ಇಲ್ಲ. 9 ಗಂಟೆಯ ನಂತರ ಸಮೀಕ್ಷೆ ಬಂದಿದರೆ ನಿಜವೆನ್ನಬಹುದಾಗಿತ್ತು. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರೋದು ಖಚಿತ ಎಂದು ಹೇಳಿದ್ದಾರೆ.