ಇದು ಸಿದ್ಧಾಂತದ ಸೋಲಲ್ಲ, ವೈಯಕ್ತಿಕ ಸೋಲು – ಸಿ.ಟಿ ರವಿ

ಚಿಕ್ಕಮಗಳೂರು: ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿ ಸಿ.ಟಿ ರವಿ ಸೋಲು ಕಂಡಿದ್ದಾರೆ. ಈ ಸೋಲು ಸಿದ್ಧಾಂತದ ಸೋಲಲ್ಲ, ವೈಯಕ್ತಿಕ ಸೋಲು ಎಂಬುದಾಗಿ ಅವರು ಹೇಳಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು ಚಿಕ್ಕಮಗಳೂರಿನಲ್ಲಿ ನೀಡಿದ ಜನಾದೇಶಕ್ಕೆ ತಲೆಬಾಗುತ್ತೇನೆ.

ಸೋಲು ಗೆಲುವು ಸ್ವಾಭಾವಿಕ ಎಂದು ಹೇಳಿದ್ದಾರೆ.

ಸೋಲಿನಿಂದ ಆಗಿರುವ ತಪ್ಪುಗಳನ್ನು ಸರಿಪಡಿಸಿಕೊಳ್ಳುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಗೆದ್ದವರಿಗೆ ಅಭಿನಂದನೆಗಳನ್ನು ಸಲ್ಲಿಸುವೆ. ಈ ಹಿಂದೆ ಸಿಕ್ಕ ಅಲ್ಪ ಸಮಯಲ್ಲಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ತಂದಿದ್ದು, ಈ ಯೋಜನೆಗಳನ್ನು ಮುಂದುವರೆಸಿಕೊಂಡು ಹೋಗಲಿ ಎಂಬುದಾಗಿ ಆಶಿಸಿದ್ದಾರೆ.

ಪ್ರಜಾಪ್ರಭುತ್ವದಲ್ಲಿ ಜನರೇ ಪ್ರಭುಗಳಾಗಿದ್ದಾರೆ. ಅವರ ತೀರ್ಮಾನಕ್ಕೆ ಬದ್ಧರಾಗಿ ಕಾರ್ಯನಿರ್ವಹಸುತ್ತೇನೆ. ಕಾರ್ಯಕರ್ತರು ಶಕ್ತಿ ಮೀರಿ ಪ್ರಯತ್ನ ಪಟ್ಟಿದ್ದಾರೆ. ಪಕ್ಷದ ಜವಾಬ್ದಾರಿಯ ಜೊತೆಗೆ ಇರುವ ಸಮಯದಲ್ಲಿ ಕ್ಷೇತ್ರಕ್ಕೆ ಸಾಕಷ್ಟು ಸಮಯ ನೀಡಿದ್ದೇನೆ. ಕಾರ್ಯಕರ್ತರು ಯಾರೂ ಧೃತಿಗೆಡಬಾರದು. ನಿಮ್ಮ ಬೆನ್ನಲುಬಾಗಿ ಸದಾ ನಿಂತು ಧೈರ್ಯ ತುಂಬುವ ಕೆಲಸ ಮಾಡುತ್ತೇನೆ. ಮತ ನೀಡಿದ ಎಲ್ಲರಿಗೂ ಹೃದಯ ಪೂರ್ವಕ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

Loading

Leave a Reply

Your email address will not be published. Required fields are marked *