ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ಅವರು ಮತ್ತೆ ಜೈಲಿಗೆ ಹೋಗುತ್ತಾರೆ ಎಂಬ ಹೆಚ್ಡಿ ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ ಮಾತನಾಡಿದ ಸಂಸದ ಡಿಕೆ ಸುರೇಶ್, ಡಿಕೆಶಿನಾ ಜೈಲಿಗೆ ಕಳುಹಿಸಿ ಅಂತಾ ಇವರೇ ಮನವಿ ಮಾಡಿರಬೇಕು. ಬಹುಶಃ ಅಮಿತ್ ಶಾಗೆ ಹೆಚ್ಡಿಕೆ ಮನವಿ ಮಾಡಿ ಬಂದಿರಬೇಕು. ಕುಮಾರಸ್ವಾಮಿ ಗೊಡ್ಡು ಬೆದರಿಕೆಗೆ ಹೆದರುವ ಜಾಯಮಾನ ನಮ್ಮದಲ್ಲ.
ಇವರು ದಾಖಲೆಗಳನ್ನು ಬಿಚ್ಚಿಡುವ ಸಮಯ ಬಂದರೆ ನಾವೂ ಸಿದ್ಧ. ಇವರ ಕನಸು ನನಸಾಗುವುದಿಲ್ಲ, ಕನಸು ಕನಸಾಗಿಯೇ ಉಳಿಯುತ್ತೆ. JDS ನಾಯಕರು ಎಲ್ಲೋ ಒಂದು ಕಡೆ ಮಾನಸಿಕವಾಗಿ ಕುಗ್ಗಿದ್ದಾರೆ. ಅವರ ಆಲೋಚನೆಗಳೆಲ್ಲ ಒಂದು ಕಡೆ ಕೇಂದ್ರಿಕೃತ ಆದಂತೆ ಕಾಣುತ್ತಿದೆ. ಕಾರ್ಯಕರ್ತರು ಇವರ ನಡೆನುಡಿ ನೋಡಿ ತಮ್ಮ ದಾರಿ ನೋಡಿಕೊಳ್ಳುತ್ತಿದ್ದಾರೆ. ಹೆಚ್.ಡಿ.ಕುಮಾರಸ್ವಾಮಿ ಹೇಳುವುದು ಸುಳ್ಳಿನ ಮಹಾ ಭಾಗ ಎಂದರು.