ಧೈರ್ಯವಾಗಿ ಪ್ರಶ್ನಿಸಿ ಅಂದಿದ್ದು ತಪ್ಪಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ ಸಮರ್ಥನೆ

ಬೆಂಗಳೂರು: ಧೈರ್ಯವಾಗಿ ಪ್ರಶ್ನಿಸಿ ಅಂದಿದ್ದು ತಪ್ಪಿಲ್ಲ ಎಂದು ವಸತಿ ಶಾಲೆಗಳಲ್ಲಿ ಘೋಷವಾಕ್ಯ ಬದಲಾವಣೆ ವಿಚಾರವನ್ನು ಸಚಿವ ಪ್ರಿಯಾಂಕ್ ಖರ್ಗೆ ಸಮರ್ಥನೆ ಮಾಡಿಕೊಂಡಿದ್ದಾರೆ. ನಗರದಲ್ಲಿ ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಮಾಜಿಕ ಸ್ಥಿತಿಗಳ ತಕ್ಕಂತೆ ಬದಲಾವಣೆ ಆಗಬೇಕು. ಧೈರ್ಯವಾಗಿ ಪ್ರಶ್ನಿಸಿ ಅಂದಿದ್ದು ತಪ್ಪಿಲ್ಲ. ಕುತೂಹಲ ಇಲ್ಲ ಅಂದರೆ ಕಲಿಕೆ ಬರಲ್ಲ.

ಕಲಿಗೆ ಬರಲ್ಲ ಅಂದರೆ ಜ್ಞಾನ ಬರಲ್ಲ. ಸಮಾಜದಲ್ಲಿ ಪ್ರಬುದ್ಧತೆ ಇರಲ್ಲ. ಪ್ರಬುದ್ಧ ಭಾರತ, ಪ್ರಬುದ್ಧ ಸಮಾಜ ಕಟ್ಟಬೇಕು ಎಂದು ಅಂಬೇಡ್ಕರ್ ಹೇಳಿದ್ದಾರೆ. ಅದು ಬೆಳೆಯಬೇಕು ಅಂದ್ರೆ ಪ್ರಶ್ನೆ ಮಾಡಲೇಬೇಕು ಅಲ್ವಾ ಎಂದು ಹೇಳಿದರು. ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಯಬೇಕು. ಅದಕ್ಕೆ ಪ್ರಶ್ನೆ ಕೇಳುವುದು ಮುಖ್ಯ. ಎಲ್ಲದಕ್ಕೂ ಉತ್ತರ ಸಿಗಲ್ಲ, ಪ್ರಶ್ನೆ ಮಾಡಿದ್ರೆ ವೈಜ್ಞಾನಿಕ ಮನೋಭಾವ ಬೆಳೆಯುತ್ತೆ. ಶಿಕ್ಷಕರಿಗೆ ಹೊಸ ರೂಪದಲ್ಲಿ ಕಲಿಕೆ ಆಗುತ್ತೆ ಎಂದರು.

Loading

Leave a Reply

Your email address will not be published. Required fields are marked *