ಬೆಂಗಳೂರು: ಜೆಡಿಎಸ್ ಸಮಾವೇಶದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಬಗ್ಗೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಜೊತೆಗಿನ ಮಾತುಕತೆ ಬಗ್ಗೆ ತಿಳಿಸಿದ್ದಾರೆ.ಅರಮನೆ ಮೈದಾನದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು,ಮೋದಿ, ಅಮಿತ್ ಶಾ ನನಗೆ ಗೌರವ ಕೊಡುತ್ತಾರೆ.
ಅವರಿಗೆ ನನ್ನ ನಡವಳಿಕೆ ಗೊತ್ತಿದೆ. ನನಗೆ ಇಷ್ಟು ಸೀಟು ಕೊಡಿ ಅಂತ ಕೇಳಿಲ್ಲ. ಪ್ರತಿ ಕ್ಷೇತ್ರದ ಬಗ್ಗೆ ವಿವರಿಸಿದ್ದೇನೆ. ಸೀಟು ಬಗ್ಗೆ ಕುಮಾರಸ್ವಾಮಿ ಕೂತು ಮಾತನಾಡುತ್ತಾರೆ ಎಂದು ತಿಳಿಸಿದ್ದಾರೆ. ನಾನು ದೆಹಲಿಯಲ್ಲಿ ಬಿಜೆಪಿ ನಾಯಕರನ್ನು ಭೇಟಿಯಾಗಿದ್ದೆ. ನಾನು ಮತ್ತೆ ಪ್ರಧಾನಿ ಆಗೋಕೆ ಅಲ್ಲ. ಪಕ್ಷ ಉಳಿಸೋಕೆ ಭೇಟಿ ಆಗಿದ್ದೆ. ಆದರೆ ನಾನು ದೆಹಲಿಯಲ್ಲಿ ಅನೈತಿಕವಾಗಿ ಸಂಪರ್ಕ ಮಾಡಿದೆ ಎಂದು ಹೇಳುತ್ತಿದ್ದಾರೆ. ಈ ರಾಜ್ಯದಲ್ಲಿ ಯಾರಿಗೆ ನೈತಿಕತೆ ಇದೆ? ಯಾರಿಗೆ ಇಲ್ಲ ಅಂತ ವಿಶ್ಲೇಷಣೆ ಮಾಡಬಲ್ಲೆ.
ಆದರೆ ನಾನು ವ್ಯಕ್ತಿಗತ ಟೀಕೆ ಮಾಡಲ್ಲ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ದೇವೇಗೌಡ ಕಿಡಿಕಾರಿದರು.
ಬಿಜೆಪಿ ಅವರು ಎಷ್ಟು ಕ್ಷೇತ್ರ ಕೊಡುತ್ತಾರೆ ಗೊತ್ತಿಲ್ಲ. ಮೋದಿ ಅವರ ಜೊತೆ ಕುಮಾರಸ್ವಾಮಿ ಮಾತಾಡಿ ಸೀಟು ಫೈನಲ್ ಮಾಡುತ್ತಾರೆ. ಸೀಟು ಅಂತಿಮವಾದ ಬಳಿಕ ಎಲ್ಲಾ ಕ್ಷೇತ್ರಕ್ಕೂ ಹೋಗಿ ಪ್ರಚಾರ ಮಾಡುತ್ತೇನೆ. ವ್ಹೀಲ್ಚೇರ್ನಲ್ಲೇ ಹೋಗಿ ಪ್ರಚಾರ ಮಾಡುತ್ತೇನೆ. ಎಲ್ಲರೂ ಬೆಂಬಲ ಕೊಡಿ ಎಂದು ಮನವಿ ಮಾಡಿಕೊಂಡರು