ಸಿಡಬ್ಲುಎಂಎ ಆದೇಶ ಪಾಲನೆ ಮಾಡಬೇಕು ಅಂತ ಹೇಳಿರುವುದು ದುರಾದೃಷ್ಟ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಸಂಪೂರ್ಣ ಸಿಡಬ್ಲುಎಂಎ ಆದೇಶವನ್ನೇ ಪರಿಗಣಿಸದೇ, ವಾಸ್ತವದ ಆಧಾರದಲ್ಲಿ ತೀರ್ಪು ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇವತ್ತು ಕಾವೇರಿ ವಿಚಾರದಲ್ಲಿ ಸುಪ್ರೀಂ ಕೊರ್ಟ್ ಎರಡು ರಾಜ್ಯಗಳ ವಾದ ಕೇಳಿ ಸಿಡಬ್ಲುಎಂಎ ಆದೇಶ ಎತ್ತಿ ಹಿಡಿದಿದೆ.

ಮುಂದಿನ 15 ದಿನ ಸಿಡಬ್ಲುಎಂಎ ಆದೇಶ ಪಾಲನೆ ಮಾಡಬೇಕು ಅಂತ ಹೇಳಿರುವುದು ದುರಾದೃಷ್ಟ. ಮತ್ತೊಮ್ಮೆ ಕರ್ನಾಟಕದ ವಸ್ತು ಸ್ಥಿತಿಯನ್ನು ಸುಪ್ರೀಂ ಕೋರ್ಟ್ ಗೆ ಮನವರಿಕೆ ಮಾಡಬೇಕಿದೆ. ಸಿಡಬ್ಲುಎಂಎ ಆದೇಶ ಅಂತಿಮವಲ್ಲ. ಸುಪ್ರೀಂ ಕೋರ್ಟ್ ಈ ವಿಚಾರದಲ್ಲಿ ತನಗೆ ಸಂಬಂಧ ಇಲ್ಲ ಎನ್ನುವುದು ಸರಿಯಲ್ಲ. ಕೇವಲ ಕರ್ನಾಟಕದ ಡ್ಯಾಮ್ ಗಳ ನೀರಿನ ಮಟ್ಟ ಲೆಕ್ಕ ಹಾಕುವುದಲ್ಲ. ತಮಿಳುನಾಡು ಡ್ಯಾಮ್ ಗಳಲ್ಲಿ ನ ನೀರಿನ ಮಟ್ಟ ಲೆಕ್ಕ ಹಾಕಬೇಕು ಎಂದು ಆಗ್ರಹಿಸಿದರು.

Loading

Leave a Reply

Your email address will not be published. Required fields are marked *