ಬೆಂಗಳೂರಿನ ಮೇಖ್ರಿ ವೃತ್ತ ಬಳಿಯ ಗಜರಾಜ ಜ್ಯುವೆಲರಿ ಶಾಪ್ ಮೇಲೂ ಐಟಿ ಅಧಿಕಾರಿಗಳ ದಾಳಿ ನಡೆದಿದೆ. ಅಂಗಡಿ ಬಾಗಿಲು ಮುಚ್ಚಿ ಒಳಗಡೆ ಪರಿಶೀಲನೆ ನಡೆಸಲಾಗುತ್ತಿದೆ. ಎರಡು ಇನ್ನೋವಾ ಕಾರಿನಲ್ಲಿ ಬಂದಿರುವ ಐಟಿ ಅಧಿಕಾರಿಗಳ ಟೀಂ ತಲಾಶ್ ನಡೆಸುತ್ತಿದೆ. ತೆರಿಗೆ ವಂಚನೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ 10ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳು ಉದ್ಯಮಿಗಳ ಮನೆ ಮೇಲೆ ದಾಳಿ ನಡೆಸಿದ್ದಾರೆ. ಬೆಳ್ಳಂಬೆಳಗ್ಗೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಉದ್ಯಮಿಗಳ ಒಡೆತನದ ಸಂಸ್ಥೆಗಳ ಮೇಲೂ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ