ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ 135 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದರೆ, ಬಿಜೆಪಿ 66 ಕ್ಷೇತ್ರಗಳಲ್ಲಿ ಗೆಲುವು ಪಡೆದುಕೊಂಡಿದೆ.
ಈ ನಡುವೆ ಜಯನಗರ ಕ್ಷೇತ್ರದ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿಯ ಅಭ್ಯರ್ಥಿ 16 ಮತಗಳ ಅಂತರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯರೆಡ್ಡಿ ವಿರುದ್ಧ ಗೆಲುವು ಸಾಧಿಸಿದ್ದಾರೆ.
ಮರು ಮತ ಎಣಿಕೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸೌಮ್ಯ ರೆಡ್ಡಿ ಅವರು 57781 ಮತಗಳನ್ನು ಪಡೆದರೆ, ಬಿಜೆಪಿ ಅಭ್ಯರ್ಥಿ ಸಿ.ಕೆ. ರಾಮಮೂರ್ತಿ ಅವರು 57797 ಮತಗಳನ್ನು ಪಡೆಯುವ ಮೂಲಕ ಕೇವಲ 16 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಗೆಲುವು ಸಾಧಿಸಿದ್ದಾರೆ.