ಬೆಂಗಳೂರು: ಎನ್ ಡಿಎ ಮೈತ್ರಿಕೂಟಕ್ಕೆ ಜೆಡಿಎಸ್ ಸೇರುವುದು ಬಹುತೇಕ ಪಕ್ಕಾ ಎನ್ನಲಾಗುತ್ತಿದೆ. ಹೀಗಾಗಿ ಇಂದು ಸಂಜೆ ಅಥವಾ ನಾಳೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ದೆಹಲಿಗೆ ಪ್ರಯಾಣ ಬೆಳಸಲಿದ್ದಾರೆ. ಜುಲೈ 18 ರಂದು ದೆಹಲಿಯಲ್ಲಿ ಎನ್ಡಿಎ ಸಭೆ ನಡೆಯಲಿದ್ದು, ಎನ್ಡಿಎ ಸಭೆಗೂ ಮುನ್ನ ಬಿಜೆಪಿ ಜೊತೆ ಹೆಚ್ ಡಿ ಕುಮಾರಸ್ವಾಮಿ ಮಾತುಕತೆ ನಡೆಸುತ್ತಾರಾ ಕಾದುನೋಡಬೇಕಿದೆ.