ಶತಕ ಸಿಡಿಸಿ ಡಾನ್ ಬ್ರಾಡ್ಮನ್ ದಾಖಲೆ ಮುರಿದ ಜೋ ರೂಟ್!

ಸ್ಟ್ರೇಲಿಯಾ (ENG vs AUS Ashes 2023 )ವಿರುದ್ಧದ ಪ್ರತಿಷ್ಠಿತ ಆಯಶಸ್ ಸರಣಿಯ ಮೊದಲ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸುವ ಮೂಲಕ ಜೋ ರೂಟ್ ಹಲವು ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್​ ತಂಡವು ಮೊದಲು ಬ್ಯಾಟಿಂಗ್ ಆಯ್ದುಕೊಂಡಿತು.

ಅದರಂತೆ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್​ ತಂಡಕ್ಕೆ ಝಾಕ್ ಕ್ರಾಲಿ (61) ಉತ್ತಮ ಆರಂಭ ಒದಗಿಸಿದ್ದರು. ಆದರೆ ಮತ್ತೊಂದೆಡೆ ಬೆನ್ ಡಕೆಟ್ (12) ಹಾಗೂ ಅಲಿ ಪೋಪ್ (31) ಬೇಗನೆ ವಿಕೆಟ್ ಒಪ್ಪಿಸಿದರು.

ಈ ಹಂತದಲ್ಲಿ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಜೋ ರೂಟ್ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ್ದ ರೂಟ್ ಸ್ವಿಚ್​ ಹಿಟ್​ಗಳ ಮೂಲಕ ಗಮನ ಸೆಳೆದರು. ಅಲ್ಲದೆ ಆಸೀಸ್ ವೇಗಿಗಳನ್ನು ಮನಸೊ ಇಚ್ಛೆ ದಂಡಿಸುವ ಮೂಲಕ 152 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 7 ಫೋರ್​ನೊಂದಿಗೆ ಅಜೇಯ 118 ರನ್ ಬಾರಿಸಿದರು. ಈ ಹಂತದಲ್ಲಿ ಇಂಗ್ಲೆಂಡ್ ತಂಡವು 393/8 ರನ್​ಗಳಿಗೆ ಡಿಕ್ಲೇರ್ ಘೋಷಿಸಿತು. ವಿಶೇಷ ಎಂದರೆ ಈ ಅಜೇಯ ಶತಕದೊಂದಿಗೆ ಜೋ ರೂಟ್ ಮೂರು ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

Loading

Leave a Reply

Your email address will not be published. Required fields are marked *