ಬಿ.ಎಲ್‌.ಸಂತೋಷ್‌ʼರನ್ನ ಭೇಟಿಯಾದ ಕೆ.ಸುಧಾಕರ್‌..!

ನವದೆಹಲಿ: ಮಾಜಿ ಸಚಿವ ಡಾ.ಕೆ.ಸುಧಾಕರ್ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವ್ರನ್ನ ಭೇಟಿ ಮಾಡಿದ್ದಾರೆ. ದೆಹಲಿಯಲ್ಲಿ ಸಂತೋಷ್‌‌ರನ್ನ ಭೇಟಿ ಮಾಡಿ ಮಹತ್ವದ ಮಾಹಿತಿಗಳನ್ನ ಹಂಚಿಕೊಂಡಿದ್ದಾರೆ.. ಸುಧಾಕರ್ ಕೂಡ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಹೌದು ಚಿಕ್ಕಬಳ್ಳಾಪುರ ಲೋಕಸಭೆ ಟಿಕೆಟ್‌ಗೆ ಸುಧಾಕರ್‌ ಕಸರತ್ತು ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಆರೋಗ್ಯ ಸಚಿವರಾಗಿದ್ದ ಡಾ. ಕೆ.ಸುಧಾಕರ್‌ ಅವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋಲನುಭವಿಸಿದ್ದರು. ಇವರ ವಿರುದ್ಧ ಸ್ಪರ್ಧೆಗಿಳಿದಿದ್ದ ಕಾಂಗ್ರೆಸ್‌ನ ಪ್ರದೀಪ್‌ ಈಶ್ವರ್‌ ಗೆಲುವು ಸಾಧಿಸಿದ್ದರು.

ಈಗ ಲೋಕಸಭೆ ಚುನಾವಣೆಗೆ ಕಾಲ ಸನ್ನಿಹಿತವಾಗಿದೆ. ಈ ಹೊತ್ತಲ್ಲಿ ರಾಜ್ಯ ನಾಯಕರು ದೆಹಲಿಗೆ ತೆರಳಿ ತಮ್ಮ ಮನದ ಇಂಗಿತವನ್ನು ವ್ಯಕ್ತಪಡಿಸುತ್ತಿದ್ದಾರೆ. ಹೈಕಮಾಂಡ್‌ ನಾಯಕರನ್ನು ಭೇಟಿಯಾಗಿ ಚುನಾವಣೆಗೆ ಟಿಕೆಟ್‌ ಗಿಟ್ಟಿಸಲು ಕಸರತ್ತು ನಡೆಸುತ್ತಿದ್ದಾರೆ ಎಂದು ಮೂಲಗಳು ಹೇಳಿವೆ.

 

Loading

Leave a Reply

Your email address will not be published. Required fields are marked *